– ವಿಶ್ರಾಂತಿ ಪಡೆಯಲು ಸಿಎಂಗೆ ವೈದ್ಯರ ಸಲಹೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
Advertisement
ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.
Advertisement
Advertisement
ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.
Advertisement
ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.