– ಸಂಸತ್ತಿಗೆ ಕುಂಟುತ್ತಾ ಬಂದ ಎಐಸಿಸಿ ಅಧ್ಯಕ್ಷ
ನವದೆಹಲಿ: ಸಂಸತ್ ಭವನ ಆವರಣದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವಿನ ಪ್ರತಿಭಟನೆ ಕಿಚ್ಚು ತಳ್ಳಾಟ-ನೂಕಾಟ ಮಟ್ಟಕ್ಕೆ ತಲುಪುವಷ್ಟು ಹೆಚ್ಚಾಗಿದೆ. ಪ್ರತಿಭಟನೆ (Protest) ವೇಳೆ ಸಂಸತ್‌ನ ಮಕರ ದ್ವಾರದ ಬಳಿ ಬಿಜೆಪಿ ಸಂಸದರು ನನ್ನನ್ನು ದೈಹಿಕವಾಗಿ ತಳ್ಳಿದ್ದಾರೆ. ಇದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತನ್ನ ಮೊಣಕಾಲಿಗೆ ಮತ್ತೆ ಗಾಯವಾಗಿದೆ (Knees injured) ಎಂದು ರಾಜ್ಯಸಭೆಯ ಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.
Advertisement
ಅಲ್ಲದೇ ಘಟನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಅಂಬೇಡ್ಕರ್ ಕುರಿತ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಇಂದು ಇಂಡಿಯಾ ಒಕ್ಕೂಟದ ಸಂಸದರು ದೆಹಲಿಯ ಪ್ರೇರಣಾ ಸ್ಥಳದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಯಿಂದ ಮಕರ ದ್ವಾರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
Advertisement
ನಾನು ಇಂಡಿಯಾ ಒಕ್ಕೂಟದ (INDIA Block) ಸಂಸದರೊಂದಿಗೆ ಮಕರ ದ್ವಾರ ತಲುಪಿದಾಗ ಬಿಜೆಪಿ ಸಂಸದರು ನನ್ನನ್ನು ದೈಹಿಕವಾಗಿ ತಳ್ಳಿದರು. ಇದರಿಂದ ನಾನು ಸಮತೋಲನ ಕಳೆದುಕೊಂಡು, ಮರಕ ದ್ವಾರದ ಬಳಿಯೇ ನೆಲದ ಮೇಲೆ ಕುಳಿತುಕೊಂಡೆ. ನನ್ನನ್ನು ತಳ್ಳಿದ್ದರಿಂದ ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನನ್ನ ಮೊಣಕಾಲುಗಳಿಗೆ ಗಾಯವಾಯಿತು. ಕೂಡಲೇ ಕಾಂಗ್ರೆಸ್ ಸಂಸದರು (Congress MPs) ಕುರ್ಚಿ ತಂದು ನನ್ನು ಕೂರಿಸಿದ್ರು. ಸ್ವಲ್ಪ ಹೊತ್ತು ಕೂತು ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಸಹಾಯದಿಂದ 11 ಗಂಟೆಗೆ ಸುಮಾರಿಗೆ ಸದನಕ್ಕೆ ಕುಂಟುತ್ತಾ ಬಂದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Advertisement
Advertisement
ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸುವಂತೆ ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ಏಕೆಂದರೆ ಇದು ವೈಯಕ್ತಿಕವಾಗಿ ನನ್ನ ಮೇಲೆ ಮಾತ್ರವಲ್ಲದೇ ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಅಧ್ಯಕ್ಷರ ಮೇಲಿನ ಹಲ್ಲೆಯಾಗಿದೆ. ಹಾಗಾಗಿ ಘಟನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸಂಸತ್ತಿನೊಳಗೆ ಹೋಗಲು ಬಿಡದೆ ನನ್ನನ್ನೇ ತಳ್ಳಿದ್ರು:
ಇನ್ನೂ ಸಂಸತ್ ಭವನ ಆವರಣದಲ್ಲಿ ನಡೆದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ರಾಗಾ, ನಾನು ಯಾರನ್ನು ತಳ್ಳಿಲ್ಲ. ಸಂಸತ್ತಿನ ಪ್ರವೇಶದ್ವಾರದ ಮೂಲಕ ಸಂಸತ್ ಭವನದ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರೇ ನನ್ನನ್ನು ತಡೆದರು, ತಳ್ಳಿದ್ರು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದಿದ್ದಾರೆ.
ಮುಂದುವರಿದು, ಸಂಸತ್‌ಗೆ ಭವನಕ್ಕೆ ಇದೊಂದೇ ಪ್ರವೇಶದ್ವಾರ, ಒಳಗೆ ಹೋಗುವುದು ನಮ್ಮ ಹಕ್ಕು. ನಮ್ಮನ್ನ ತಳ್ಳುವುದರಿಂದ ಸಮಸ್ಯೆಯಿಲ್ಲ, ಆದ್ರೆ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಹಾಗೂ ಅಂಬೇಡ್ಕರ್ ಅವರ ಸ್ಮರಣೆಗೆ ಅವಮಾನ ಮಾಡಿದ್ದಾರೆ. ಇದನ್ನು ನಾವು ಸಹಿಸಲ್ಲ ಎಂದು ಕಿಡಿ ಕಾರಿದ್ದಾರೆ.
ಸಂಸತ್ ಆವರಣದಲ್ಲಿ ಸಾರಂಗಿಗೆ ಆಗಿದ್ದೇನು?
ಉಭಯ ಪಕ್ಷಗಳು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕುಸಿದುಬಿದ್ದಿದ್ದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನನ್ನನ್ನ ತಳ್ಳಿದ್ದಾರೆ ಎಂಬ ಆರೋಪ ಮಾಡಿದ್ದರು. ನಂತರ ಅವರನ್ನು ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಯಿತು.
ಬಿಜೆಪಿ vs ಕಾಂಗ್ರೆಸ್ ಪ್ರೊಟೆಸ್ಟ್:
ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನ’ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಇದೊಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತು’ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಎನ್ನುವ ಪ್ಲೆ ಕಾರ್ಡ್ ಹಿಡಿದು ಬಿಜೆಪಿ ಸದಸ್ಯರು ಪ್ರತಿಭಟನೆಗಿಳಿದಿದ್ದಾರೆ.