-ಸರ್ಕಾರ ರಚನೆಗೆ ಮುಂದಾದ ಕಾಂಗ್ರೆಸ್
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬಿಜೆಪಿ ನಡೆಸಿದ ಹೊಸ ಸಿಎಂ ಆಯ್ಕೆಯ ಸಭೆಯಲ್ಲಿ ಸಹಮತ ವ್ಯಕ್ತವಾಗಿಲ್ಲ. ಇತ್ತ ಸರ್ಕಾರ ರಚಿಸಲು ತಮಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ನವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಭಾನುವಾರ ರಾತ್ರಿ ಸುಮಾರು 6 ಗಂಟೆ ಬಿಜೆಪಿ ಹೈಕಮಾಂಡ್ ಹೊಸ ಅಭ್ಯರ್ಥಿ ಆಯ್ಕೆಗಾಗಿ ಚರ್ಚೆ ನಡೆಸಿತ್ತು. ಸಭೆಯ ಅಂತ್ಯದಲ್ಲಿ ವಿಧಾನಸಭೆಯ ಅಧ್ಯಕ್ಷ ಪ್ರಮೋದ್ ಸಾವಂತ್ ಮತ್ತು ವಿಶ್ವಜಿತ್ ರಾಣೆ ಅವರ ಹೆಸರು ಕೇಳಿಬಂದಿದೆ. ಕೆಲ ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಬಿಜೆಪಿ ಸಿಎಂ ಯಾರಾಗಬೇಕೆಂಬುದನ್ನು ಅಂತಿಮಗೊಳಿಸಿಲ್ಲ. 40 ಶಾಸಕರನ್ನು ಹೊಂದಿರುವ ಗೋವಾ ವಿಧಾನಸಭೆ ಸಂಖ್ಯೆ 36ಕ್ಕೆ ಇಳಿದಿದ್ದು ಕಾಂಗ್ರೆಸ್ ಸರ್ಕಾರ ರಚನೆಗೆ ಅವಕಾಶ ಕೋರಿದೆ.
Advertisement
Advertisement
ಗೋವಾದಲ್ಲಿ ಪಕ್ಷಗಳ ಬಲಾಬಲ ಹೇಗಿದೆ?
ಬಿಜೆಪಿ-12, ಮಹಾರಾಷ್ಟ್ರ ಗೋಮಂತಕ ಪಕ್ಷ-3, ಗೋವಾ ಪಾರ್ವರ್ಡ್ ಪಕ್ಷ-3, ನಿರ್ದಲಿಯ-3, ಕಾಂಗ್ರೆಸ್-14 ಮತ್ತು ಎನ್‍ಎಸ್‍ಪಿ-1 ಒಳಗೊಂಡಂತೆ 36 ಶಾಸಕರನ್ನು ಗೋವಾ ವಿಧಾನಸಭೆ ಹೊಂದಿದೆ. ಸದ್ಯ 19 ಶಾಸಕರನ್ನು ಹೊಂದಿರುವ ಪಕ್ಷ ಅಥವಾ ಮೈತ್ರಿ ಸರ್ಕಾರ ರಚಿಸಬಹುದು.
Advertisement
ಈ ಮೊದಲು ಬಿಜೆಪಿ ತನ್ನ 12 ಶಾಸಕರೊಂದಿಗೆ ಮಹಾರಾಷ್ಟ್ರ ಗೋಮಂತಕ ಪಕ್ಷ (3), ಗೋವಾ ಪಾರ್ವರ್ಡ್ ಪಕ್ಷ (3) ಮತ್ತು ನಿರ್ದಲಿಯ (3) ಬೆಂಬಲದೊಂದಿಗೆ ಗೋವಾದಲ್ಲಿ ಸರ್ಕಾರ ರಚನೆ ಮಾಡಿತ್ತು. ಸದ್ಯ ಮನೋಹರ್ ಪರಕ್ಕರ್ ನಿಧನದ ಹಿನ್ನೆಲೆಯಲ್ಲಿ ಸಿಎಂ ಆಯ್ಕೆ ವಿಚಾರದಲ್ಲಿ ಮೈತ್ರಿ ಪಕ್ಷಗಳಲ್ಲಿ ಒಮ್ಮತ ಮೂಡುತ್ತಿಲ್ಲ ಎಂದು ರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿವೆ. ಈ ಮಧ್ಯೆ ಕಾಂಗ್ರೆಸ್ ಇತರೆ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ಹೊಸ ತಂತ್ರಗಳನ್ನು ಬಳಸಿಕೊಳ್ಳಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
Advertisement
Goa Congress leaders Girish Chodankar and Chandrakant Kavlekar write letter to Goa Governor, Mridula Sinha staking claim to form Government in the state. pic.twitter.com/vqFU6gBTUi
— ANI (@ANI) March 17, 2019