ಬೆಂಗಳೂರು: ನಗರದಿಂದ ಕೊಚ್ಚಿಗೆ (Kochi) ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ತುರ್ತು ಭೂ ಸ್ಪರ್ಶ (Emergency Landing) ಮಾಡಿದ ಘಟನೆ ನಡೆದಿದೆ.
ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ 179 ಪ್ರಯಾಣಿಕರನ್ನು ಹೊತ್ತು ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 1132ರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ವಿಮಾನ ಲ್ಯಾಂಡಿಂಗ್ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಶೂ ವ್ಯಾಪಾರಿ ಮನೆಯಲ್ಲಿ ಕಂತೆ ಕಂತೆ ಹಣ – ಬರೋಬ್ಬರಿ 40 ಕೋಟಿ ರೂ. ಜಪ್ತಿ!
ಇತ್ತೀಚೆಗಷ್ಟೇ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.
ಮೆ 17ರ ಸಂಜೆ 6 ಗಂಟೆಗೆ ಏರ್ ಇಂಡಿಯಾ ವಿಮಾನ ದೆಹಲಿಯಿಂದ ಹೊರಟಿತ್ತು. ಈ ವೇಳೆ ವಿಮಾನದ ಎಸಿಯಲ್ಲಿ (ಹವಾನಿಯಂತ್ರಣ ಘಟಕ) ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 6:38 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು. ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ