ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ(KOCHIMUL) ನೇಮಕಾತಿ ಪಡೆಯಲು ಶಿಫಾರಸು ಪತ್ರ ಕೊಟ್ಟವರಿಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ.
ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಮನೆಯ ಮೇಲೆ ದಾಳಿ ಮಾಡಿದಾಗ 30ಕ್ಕೂ ಹೆಚ್ಚು ಸಚಿವರು, ಶಾಸಕರ ಶಿಫಾರಸು ಪತ್ರ ಪತ್ತೆಯಾಗಿದೆ ಎಂದು ಇಡಿ ಅಧಿಕೃತವಾಗಿ ತಿಳಿಸಿತ್ತು. ಇದನ್ನೂ ಓದಿ: ಮೇಯರ್ ಚುನಾವಣೆ : ಮಾಲ್ಡೀವ್ಸ್ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ
Advertisement
Advertisement
ಈಗ ನೇಮಕಾತಿಯಾದ 10 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಪ್ರತಿಯೊಬ್ಬ ಅಭ್ಯರ್ಥಿಗಳ ಬಳಿ 20 ರಿಂದ 30 ಲಕ್ಷ ರೂ. ಹಣವನ್ನು ಪಡೆಯಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆಯ್ಕೆಯಾದ ಎಲ್ಲರಿಗೂ ಇಡಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ 1 ಮೊಟ್ಟೆಯ ಬೆಲೆ 33 ರೂ. – ಈರುಳ್ಳಿ ಪ್ರತಿ ಕೆಜಿಗೆ 250 ರೂ.
Advertisement
ಮೊದಲ ಹಂತದಲ್ಲಿ 10 ಮಂದಿಯನ್ನು ಇಡಿ ವಿಚಾರಣೆ ನಡೆಸಲಿದ್ದು ಶಿಫಾರಸು ಪತ್ರ ಕೊಟ್ಟ ಎಲ್ಲರನ್ನು ವಿಚಾರಣೆ ನಡೆಸಲಿದೆ. ಲೋಕಸಭೆ ಚುನಾವಣೆ ಮುನ್ನವೇ ವಿಚಾರಣಾ ಮ್ಯಾರಥಾನ್ ನಡೆಯಲಿದೆ.
Advertisement