ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ

Public TV
1 Min Read
KOCHIMUL Scam ED raids premises of Karnataka Congress MLA Nanjegowda in money laundering probe 1

ಕೋಲಾರ: ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ (KY Nanjegowda) ಮನೆ ಮೇಲೆ ದಾಳಿ ನಡೆಸಿದ್ದಾರೆ.

ನಂಜೇಗೌಡ ಅವರು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (KOCHIMUL) ಅಧ್ಯಕ್ಷರಾಗಿದ್ದು, ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿರುವ ಅವರ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

KOCHIMUL Scam ED raids premises of Karnataka Congress MLA Nanjegowda in money laundering probe 2

ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್‌ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಇತ್ತೀಚೆಗೆ ಕೋಚಿಮುಲ್‌ ನೇಮಕಾತಿ ವಿಚಾರದಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿರುವ ಅರೋಪ ಕೇಳಿ ಬಂದಿತ್ತು. ಇದನ್ನೂ ಓದಿ: ಇನ್ಮುಂದೆ ಮದುವೆ, ಪ್ರವಾಸಕ್ಕೆ ಸಿಗಲಿದೆ ಬಿಎಂಟಿಸಿ ಬಸ್ – ಯಾವ್ಯಾವ ಬಸ್‍ಗೆ ಎಷ್ಟು ರೇಟ್?

25 ಜನ ಅಧಿಕಾರಿಗಳ ತಂಡ ಬೆಳಗಿನ ಜಾವ 5 ಗಂಟೆಗೆ ಡೈರಿಗೆ ಆಗಮಿಸಿ ದಾಖಲೆ ಪರಿಶೀಲಿಸುತ್ತಿದೆ. ಹಾಲು ಒಕ್ಕೂಟದ ಸುತ್ತಮುತ್ತ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ. ಏಕ ಕಾಲದಲ್ಲಿ 10 ಕಡೆಗಳಲ್ಲಿ ಇಡಿ ತಂಡ ದಾಳಿ ಮಾಡಿದೆ. ಮಾಲೂರು ತಾಲೂಕಿನ ದೊಡ್ಡಮಲೆ ಗ್ರಾಮದಲ್ಲಿರುವ ಆಪ್ತ ಸಹಾಯಕ ಹರೀಶ್ ಮನೆ ಮೇಲೂ ದಾಳಿ ನಡೆದಿದೆ.

 

ಕೋಚಿಮುಲ್ ಎಂಡಿ ಗೋಪಾಲ ಮೂರ್ತಿ ಕೋಲಾರ ನಿವಾಸ, ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್ ಅವರ ಬೆಂಗಳೂರು ರಾಮಮೂರ್ತಿ ನಗರದಲ್ಲಿರುವ ಮನೆ ಮೇಲೂ ದಾಳಿ ನಡೆದಿದೆ.

 

Share This Article