ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇಂದು ಒಂದೇ ದಿನ 28 ವಿದ್ಯಾರ್ಥಿಗಳು ಸೇರಿದಂತೆ 49 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
Advertisement
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲ್ಲೂರು ಸಿದ್ಧಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19 ವಿದ್ಯಾರ್ಥಿಗಳಿಗೆ ಪಾಸಿಟಿವ್ ಇರುವುದು ದೃಢವಾಗಿದೆ. ಶಾಲೆಯ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಓಮಿಕ್ರಾನ್ ಸೋಂಕು ಪತ್ತೆ- ರಾಜ್ಯದಲ್ಲಿ ಸಂಖ್ಯೆ 3ಕ್ಕೇರಿಕೆ
Advertisement
ಶಾಲೆಯಲ್ಲಿರುವ ಒಟ್ಟು 210 ವಿದ್ಯಾರ್ಥಿಗಳ ಪೈಕಿ 75 ವಿದ್ಯಾರ್ಥಿಗಳಿಗೆ ಅರೋಗ್ಯ ಇಲಾಖೆಯಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ 19 ವಿದ್ಯಾರ್ಥಿಗಳಲ್ಲಿ ಸೋಂಕು ದೃಢವಾಗಿದೆ. ಇನ್ನೂ 135 ವಿದ್ಯಾರ್ಥಿಗಳ ವರದಿ ಬಾಕಿಯಿದ್ದು, ವರದಿಗಾಗಿ ಅರೋಗ್ಯ ಇಲಾಖೆ ಕಾಯುತ್ತಿದೆ. ಇನ್ನು ಮಡಿಕೇರಿಯ ಕೊಡಗು ವಿದ್ಯಾಲಯದ 9 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. 1 ರಿಂದ 6 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ.
Advertisement
Advertisement
ಕಳೆದ ವಾರವಷ್ಟೇ ಈ ಶಾಲೆಯ 11 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಅರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲನೆಯಾಗದೇ ಇರುವುದರಿಂದ ಕೋವಿಡ್ ಪ್ರಕರಣ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಆಂಧ್ರ, ಚಂಡೀಗಢದಲ್ಲಿ ಖಾತೆ ತೆರೆದ ಓಮಿಕ್ರಾನ್- ದೇಶದಲ್ಲಿ 35ಕ್ಕೇರಿದ ಸಂಖ್ಯೆ