ಮಡಿಕೇರಿ: ಬಳ್ಳಾರಿ, ರಾಯಚೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸರಣಿ ಸಾವಿನ ಪ್ರಕರಣ ಇಡೀ ರಾಜ್ಯದಲ್ಲಿ ಬಾಣಂತಿಯರ ಆತಂಕಕ್ಕೆ ಕಾರಣವಾಗಿತ್ತು. ಈ ನಡುವೆ 2024ರ ವರ್ಷದಲ್ಲಿ ಬಾಣಂತಿಯರ (Maternal) ಸಾವಿನ ಸಂಖ್ಯೆ ಶೂನ್ಯವಾಗಿದ್ದು, ಇಡೀ ರಾಜ್ಯಕ್ಕೆ ಕೊಡಗು ಮಾದರಿಯಾಗಿದೆ.
Advertisement
ಕರ್ನಾಟಕದ ಕಾಶ್ಮೀರ ಎಂದೇ ಕರೆಯುವ ಕೊಡಗು (Kodagu) ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ಅಕ್ಟೋಬರ್ ವರೆಗೆ 3,462 ಮಹಿಳೆಯರು ಹೆರಿಗೆ ಮಾಡಿಸಿಕೊಂಡಿದ್ದು, ಯಾವುದೇ ಸಾವಿನ ಪ್ರಕರಣ ದಾಖಲಾಗಿಲ್ಲ. ಅಲ್ಲದೇ ಇತರೆ ಜಿಲ್ಲೆಗಳಿಗೆ ಹೋಲಿಸುವಾಗ ಕೊಡಗು ಜಿಲ್ಲೆಯಲ್ಲಿ ಶಿಶುಗಳ ಮರಣ ಪ್ರಮಾಣ ಸಹ ಅತಿ ಕಡಿಮೆ ಇದೆ. ಈ ಮೂಲಕ ಬಾಣಂತಿಯರ ರಕ್ಷಣೆ ಹಾಗೂ ಶಿಶುಮರಣ ತಡೆಯುವಲ್ಲಿ ಕೊಡಗು ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ.
Advertisement
Advertisement
ಕೊಡಗಿನಲ್ಲಿ ಯಾವುದೇ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಿಲ್ಲ. ಹೀಗಿದ್ದರೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಬಾಣಂತಿಯರಿಗೆ ಹೆರಿಗೆ ಸಂದರ್ಭದಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ಪೌಷ್ಟಿಕ ಆಹಾರ ನೀಡಿ ಆರೈಕೆ ಮಾಡುವಲ್ಲಿ ಆರೋಗ್ಯ ಕಾರ್ಯಕರ್ತರೂ ಸಫಲರಾಗಿದ್ದು, ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಶೂನ್ಯಕ್ಕೆ ತಲುಪಲು ಕಾರಣವಾಗಿದೆ. ಇದನ್ನೂ ಓದಿ: ದತ್ತಪೀಠದ ಪೂಜಾ ಪದ್ಧತಿ – ಸುಪ್ರಿಂ ಸೂಚನೆಯಂತೆ ಕ್ಯಾಬಿನೆಟ್ ಸಬ್ ಕಮಿಟಿ ಸಭೆ
Advertisement
ಇದರೊಂದಿಗೆ ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದರೂ ಆರೋಗ್ಯ ಇಲಾಖೆಯ ಸಿಬ್ಬಂದಿ ಕಾಲ ಕಾಲಕ್ಕೆ ಬಾಣಂತಿಯರಿಗೆ ಆರೈಕೆ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿರುವುದರಿಂದ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಶೂನ್ಯವಾಗಿದೆ. ಹೀಗಾಗಿ ಪಕ್ಕದ ಹಾಸನ ಜಿಲ್ಲೆಯ ಅರಕಲಗೋಡು, ಸಕಲೇಶಪುರ, ಪಿರಿಯಾಪಟ್ಟಣ ಸುಳ್ಯ ಸೇರಿದಂತೆ ನಾನಾ ಭಾಗಗಳಿಂದ ಬಾಣಂತಿಯರು ಹೆರಿಗೆ ಮಾಡಿಸಲು ಕೊಡಗು ಜಿಲ್ಲೆಗೆ ಬರುತ್ತಿದ್ದಾರೆ ಎಂದು ಇಲ್ಲಿನ ವೈದ್ಯರು ʻಪಬ್ಲಿಕ್ ಟಿವಿʼಗೆ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ -ಸಾಕಾರಗೊಂಡ ದಶಕಗಳ ಕನಸು
ಕೊಡಗಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ವಿವಿಧ ಕಾರಣಗಳಿಂದ 14 ಬಾಣಂತಿಯರು ಸಾವನ್ನಪ್ಪಿದ್ದರು. ಆದ್ರೆ 2024ರ ಸಾಲಿನಲ್ಲಿ ಹೆರಿಗೆ ಮಾಡಿಸಿದ 3,462 ಬಾಣಂತಿಯರು ಸೇಫ್ ಆಗಿದ್ದಾರೆ. ಇದರಿಂದ ಇಲ್ಲಿನ ವೈದುರು ಜನರ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ