Crime
ಮಂಜಿನ ನಗರಿಯಲ್ಲಿ ಹೊತ್ತಿ ಉರಿದ ಕುರುಚಲು ಕಾಡು
ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ವಿದ್ಯುತ್ ಟ್ರಾನ್ಸ್ಫರ್ಮರ್ ನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್ ನ ಕಿಡಿ ಬೆಂಕಿಯಿಂದಾಗಿ ಕುರುಚಲು ಕಾಡು ಹೊತ್ತಿ ಉರಿದಿರುವ ಘಟನೆ ನಡೆದಿದೆ.
ವಿದ್ಯುತ್ ಟ್ರಾನ್ಸ್ಫರ್ಮರ್ ಶಾರ್ಟ್ ಸಕ್ರ್ಯೂಟ್ ಉಂಟಾಗಿದೆ. ಆಗ ಕಿಡಿ ಬೆಂಕಿ ಎಕರೆಯಷ್ಟು ಕುರುಚಲು ಕಾಡು ಸುಟ್ಟು ಭಸ್ಮವಾಗಿದೆ. ಮಡಿಕೇರಿ ನಗರದ ಪ್ರಸಿದ್ಧ ನೆಹರು ಮಂಟಪದ ಸಮೀಪದಲ್ಲಿ ಬೆಂಕಿ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.
ಶಾರ್ಟ್ ಸಕ್ರ್ಯೂಟ್ ನಿಂದ ಉಂಟಾದ ಬೆಂಕಿ ಕಿಡಿ ಕೆಳಗೆ ಬಿದ್ದಿದ್ದು, ಬಿಲಿಸಿನಿಂದ ಒಣಗಿದ್ದ ಹುಲ್ಲಿಗೆ ಬೆಂಕಿಯ ಹೊತ್ತಿ ಉರಿದಿದೆ. ಜೊತೆಗೆ ಭಾರೀ ಪ್ರಮಾಣದ ಗಾಳಿ ಬೀಸಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಬೆಂಕಿ ಜೋರಾಗುತ್ತಿದ್ದರಂತೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲೇ ಎಕರೆಯಷ್ಟು ಪ್ರದೇಶದ ಕಿರುಚಲು ಅರಣ್ಯ ಸುಟ್ಟು ಭಸ್ಮವಾಗಿದೆ.