ಮಡಿಕೇರಿ: ಅತೀ ದೊಡ್ಡ ಮರ ದಂಧೆಯನ್ನು ಕೊಡಗು ಪೊಲೀಸರು ಭೇದಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಿವಿಧ ಮರಗಳನ್ನು ವಿರಾಜಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ.
ಕಿಂಗ್ ಪಿನ್ ಕಳ್ಳೀಚಂಡ ನೋಬಿನ್ ನಡೆಸುತ್ತಿದ್ದ ಅಕ್ರಮ ಮರ ದಂಧೆಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಕೊಡಗು ಎಸ್‍ಪಿ ಸುಮನ್ ಡಿ. ಪನ್ನೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಮರ ಸಂಗ್ರಹ ಯಾರ್ಡ್ ನಲ್ಲಿದ್ದ ಕೋಟ್ಯಂತರ ರೂಪಾಯಿಗೆ ಬೆಲೆಬಾಳುವ ಮರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಕಳ್ಳೀಚಂಡ ನೋಬಿನ್‍ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
Advertisement
ನಾಲ್ಕೇರಿಯಲ್ಲಿ ಮನೆಗೆ ಡಿಸಿಐಬಿ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳ ದಾಳಿ ನಡೆಸಿ, ಬೀಟೆ, ಹಲಸು, ಹೆಬ್ಬಲಸು ಮರಗಳನ್ನು ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಲಾರಿಗಳು ಮತ್ತು ಫಾರ್ಚೂನರ್, ಬೊಲೇರೋ ಕಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
Advertisement
ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.