ಮಡಿಕೇರಿ: ಕೊಡಗು (Kodagu) ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯಕ್ಕೆ (Harangi Dam) ನೀರಿನ ಒಳಹರಿವಿನ ಪ್ರಮಾಣದಲ್ಲಿ ಕೊಂಚ ಮಟ್ಟಿಗೆ ಏರಿಕೆ ಕಂಡುಬಂದಿದೆ.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ (Rain) ಇಂದು ಜಲಾಶಯಕ್ಕೆ ಒಟ್ಟು 858 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯದ ನೀರಿನ ಮಟ್ಟ ಮತ್ತು ಗರಿಷ್ಠ ಸಂಗ್ರಹ ಸಾಮರ್ಥ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ 180 ಕ್ಯೂಸೆಕ್ ನೀರನ್ನು ನದಿಗೆ ಹೊರಹರಿಸುತ್ತಿದ್ದಾರೆ. ಇದನ್ನೂ ಓದಿ: ಭಾರತದಿಂದಲೇ ಪೆಟ್ರೋಲ್ ಖರೀದಿಸುತ್ತಿದೆ ರಷ್ಯಾ
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲೂ ಇದೇ ರೀತಿ ಮಳೆ ಮುಂದುವರಿದರೆ, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ.ಮುಂಜಾಗ್ರತಾ ಕ್ರಮವಾಗಿ ಜಲಾಶಯದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.
