ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ (Kodagu District) ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ (Bhagamandala Triveni Sangama) ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ನೀರಿನ ಹರಿವು ಹೆಚ್ಚಿದ ಪರಿಣಾಮ ತ್ರಿವೇಣಿ ಸಂಗಮದ ಉದ್ಯಾನವನ ಸಂಪೂರ್ಣ ಜಲಾವೃತಗೊಂಡಿದ್ದು, ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೂ ನೀರು ನುಗ್ಗಿದೆ. ಕಾವೇರಿ ನದಿಗೆ (Cauvery River) ಹೆಚ್ಚಿನ ಪ್ರಮಾಣದಲ್ಲಿ ನೀರು ಸೇರುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ನಾಪೋಕ್ಲು ಅಯ್ಯಗೇರಿ ಸಣ್ಣ ಪುಲಿಕೋಟ್ಟು ರಸ್ತೆ ಮೇಲೆಯೂ ನೀರು ಹರಿಯುವ ಸಾಧ್ಯತೆ ಇದೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಇಲ್ಲ ಮಳೆ; ಮೈದುಂಬಿ ಹರಿದ ತುಂಗಭದ್ರಾ – ಉಕ್ಕಡಗಾತ್ರಿ ಸ್ನಾನಘಟ್ಟ, ಅಂಗಡಿಗಳು ಜಲಾವೃತ

ಪ್ರಾಥಮಿಕ – ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಮಳೆ (Rain) ಮುಂದುವರಿದಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಇತ್ತ ಬ್ರಹ್ಮಗಿರಿ ಭಾಗದಲ್ಲಿ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟ ಒಂದೇ ದಿನದಲ್ಲಿ ಸುಮಾರು 4 ಅಡಿಯಷ್ಟು ಏರಿಕೆಯಾಗಿದೆ. ಇದನ್ನೂ ಓದಿ: ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ
ಕುಶಾಲನಗರ ಗಡಿಭಾಗದ ಕೊಪ್ಪ ಸೇತುವೆ ಬಳಿಯೂ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಕೆಲವೇ ದಿನಗಳ ಹಿಂದೆ ಬಂಡೆಗಳು ಕಾಣಿಸುತ್ತಿದ್ದ ನದಿ ಈಗ ಸಂಪೂರ್ಣ ಭರ್ತಿಯಾಗಿದೆ. ಹಾರಂಗಿ ಜಲಾಶಯಕ್ಕೆ ಸುಮಾರು 2,000 ಕ್ಯೂಸೆಕ್‌ಗೂ ಅಧಿಕ ಒಳಹರಿವು ದಾಖಲಾಗಿದ್ದು, ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ.
