– ಸೈನಿಕ ಬೇಗ ಗುಣಮುಖರಾಗಿ ಬರಲೆಂದು ಪ್ರಾರ್ಥಿಸಿದ ಗ್ರಾಮಸ್ಥರು
ಮಡಿಕೇರಿ: ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಮತ್ತೋರ್ವ ಕೊಡಗಿನ ಯೋಧ ದಿವಿನ್ (28) ಅವರ ಸ್ಥಿತಿ ಚಿಂತಾಜನಕವಾಗಿದೆ.
ಹೌದು, ಜಮ್ಮು ಕಾಶ್ಮೀರದಲ್ಲಿ ಮೊನ್ನೆ ಸಂಭವಿಸಿದ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ಗಂಭೀರ ಗಾಯಗೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಪುರ ಗ್ರಾಮದ 28 ವರ್ಷ ಪ್ರಾಯದ ದಿವಿನ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯೋಧನಾಗಿದ್ದಾರೆ. ಇದನ್ನೂ ಓದಿ: ಪೂಂಚ್‍ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರಿಗೆ ಕಣ್ಣೀರ ವಿದಾಯ
ಯೋಧನ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಸೇನೆಯಿಂದ ಕುಟುಂಬಸ್ಥರಿಗೆ ಮಾಹಿತಿ ಬಂದಿದೆ. ಸೇನೆಯಿಂದ ದಿವಿನ್ ತಾಯಿ ಅವರಿಗೆ ಕರೆ ಬಂದಿತ್ತು. ಜಯ ಅವರು ನಿನ್ನೆ ಸಂಜೆಯೇ ಕೊಡಗಿನಿಂದ ಶ್ರೀನಗರಕ್ಕೆ ತೆರಳಿದ್ದಾರೆ. ಅಲ್ಲಿಗೆ ತೆರಳಿದ ಬಳಿಕವಷ್ಟೇ ದಿವಿಲ್ ಆರೋಗ್ಯದ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ದಿವಿನ್ 10 ವರ್ಷದ ಹಿಂದೆ ಸೈನ್ಯಕ್ಕೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿತು. ಇದೇ ಫೆಬ್ರವರಿಯಲ್ಲಿ ವಿವಾಹ ನಿಶ್ಚಯವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗಾ ಕುಟುಂಬಸ್ಥರು, ಗ್ರಾಮಸ್ಥರು ದಿವಿನ್ ಅದಷ್ಟು ಬೇಗಾ ಹುಶಾರಾಗಿ ಬರುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಪೂಂಚ್‌ನಲ್ಲಿ ದುರಂತ – 300 ಅಡಿಯ ಆಳದ ಕಣಿವೆಗೆ ಬಿದ್ದ ಸೇನಾ ವಾಹನ, 5 ಮಂದಿ ಬಲಿ