Connect with us

Crime

ಮದ್ಯದ ಅಮಲಿನಲ್ಲಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಬೈದು, ಭದ್ರತಾ ಸಿಬ್ಬಂದಿಗೆ ಥಳಿಸಿದ ರೋಗಿ

Published

on

ಮಡಿಕೇರಿ: ರೋಗಿಯೊಬ್ಬ ಮದ್ಯದ ಅಮಲಿನಲ್ಲಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಬೈದು, ಸೆಕ್ಯುರಿಟಿ ಗಾರ್ಡ್ ಗೆ ಥಳಿಸಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ವಿರಾಜಪೇಟೆಯ ದರ್ಶನ್ ಆಸ್ಪತ್ರೆಯಲ್ಲಿ ಗಲಾಟೆ ಮಾಡಿಕೊಂಡ ವ್ಯಕ್ತಿ. ದರ್ಶನ್ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದಿದ್ದ. ಈ ವೇಳೆ ಮಹಿಳಾ ಸಿಬ್ಬಂದಿಯ ಜೊತೆಗೆ ಜಗಳ ಆರಂಭಿಸಿ, ಅವಾಚ್ಯ ಪದಗಳಿಂದ ಬೈದಿದ್ದಾನೆ. ಇದನ್ನು ಕೇಳಿಸಿಕೊಂಡ ಸೆಕ್ಯುರಿಟಿ ಗಾರ್ಡ್ ಜಗಳ ಬಿಡಿಸಲು ಮುಂದಾಗಿದ್ದಾನೆ. ಈ ವೇಳೆ ಮತ್ತಷ್ಟು ರಂಪಾಟ ಮಾಡಿದ ದರ್ಶನ್ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ಮಾಡಿದ್ದಾನೆ.

ದರ್ಶನ್ ವರ್ತನೆಯಿಂದ ಬೇಸತ್ತ ಆಸ್ಪತ್ರೆಯ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿ ದರ್ಶನ್‍ನನ್ನು ವ್ಯಕ್ತಿಯ ಬಂಧಿಸಿದ್ದಾರೆ. ಈ ಸಂಬಂಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *