ಮಡಿಕೇರಿ: ಚುನಾವಣೆ ಬಹಿಷ್ಕರಿಸಿದ ಗ್ರಾಮಕ್ಕೆ ಮತದಾನ ಮಾಡುವಂತೆ ಮನವೊಲಿಸಲು ತೆರಳಿದ್ದ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ.
ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಡಿಗೋಡು ಗ್ರಾಮದ ಜನರು ಸಿಟ್ಟಾಗಿ ತಹಶೀಲ್ದಾರ್ ಅವರನ್ನು ಪ್ರಶ್ನಿಸಿದ್ದಾರೆ.
Advertisement
ಬಹಿಷ್ಕಾರ ಯಾಕೆ?
ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲ. ನದಿ ದಡದಲ್ಲಿ ವಾಸವಾಗಿರುವ ನೂರಾರು ಕುಟುಂಬಗಳು ಗ್ರಾಮವನ್ನು ಅಭಿವೃದ್ಧಿ ಪಡಿಸುವಂತೆ ಕಳೆದ ಹಲವು ವರ್ಷಗಳಿಂದಲೂ ಜಿಲ್ಲಾಡಳಿತವನ್ನು ಒತ್ತಾಯಿಸಿ ನಿರಂತರ ಪ್ರತಿಭಟನೆ ಮಾಡುತಿದ್ದರು. ಆದರೆ ಗ್ರಾಮಸ್ಥರ ಪ್ರತಿಭಟನೆಗೆ ಯಾರೂ ಕ್ಯಾರೇ ಎಂದಿರಲಿಲ್ಲ.
Advertisement
ಪ್ರತಿಭಟನೆ ಮಾಡಿದರೂ ಯಾರು ನಮ್ಮ ಸಮಸ್ಯೆಗೆ ಸ್ಪಂದಿಸದ ಕಾರಣ ಗ್ರಾಮಸ್ಥರು ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಎಚ್ಚರಿಕೆಯನ್ನು ಒಂದು ತಿಂಗಳ ಹಿಂದೆ ನೀಡಿದ್ದರು. ಆದರೂ ಜಿಲ್ಲಾಡಳಿತದ ಅಧಿಕಾರಿಗಳು ಗ್ರಾಮದತ್ತ ತಿರುಗಿ ನೋಡಿರಲಿಲ್ಲ. ನಿನ್ನೆ ಸಂಜೆ ತಹಸೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಮತದಾನ ಮಾಡುವಂತೆ ಮನವೊಲಿಸಲು ಮುಂದಾದಾಗ ಗ್ರಾಮಸ್ಥರು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.