ಮಡಿಕೇರಿ: ಭಾಗಮಂಡಲದಲ್ಲಿ (Bhagamandala) ನಿರ್ಮಾಣವಾಗಿರುವ ಕೊಡಗಿನ (Kodagu) ಏಕೈಕ ಮೇಲ್ಸೇತುವೆ (Flyover) ವಾಹನ ಸಂಚಾರಕ್ಕೆ ಮುಕ್ತಗೊಂಡಿದ್ದು ಇನ್ನು ಮುಂದೆ ಪ್ರವಾಹ ಬಂದರೂ ಗ್ರಾಮಸ್ಥರು, ಕಾವೇರಿ ಭಕ್ತರು (Cauvery Devotees) ಯಾವುದೇ ಅತಂಕ ಇಲ್ಲದೇ ಮಳೆಗಾಲದಲ್ಲೂ ಓಡಾಟ ನಡೆಸಬಹುದಾಗಿದೆ.
ಹೌದು. ಸುಮಾರು ಆರು ವರ್ಷಗಳ ಬಳಿಕ ಸೇತುವೆ ಕಾಮಗಾರಿ ಮುಕ್ತಾಯಗೊಳ್ಳುತ್ತಿದ್ದು, ಒಂದಷ್ಟು ಸಣ್ಣಪುಟ್ಟ ಕೆಲಸಗಳು ಬಾಕಿ ಇವೆ. ವಾಹನಗಳ ಸಂಚಾರಕ್ಕೆ ಈಗಾಗಲೇ ಮೇಲ್ಸೇತುವೆಯಲ್ಲಿ ಅವಕಾಶ ಮಾಡಲಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೇಲ್ಸೇತುವೆ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. ಇದನ್ನೂ ಓದಿ: ವರ್ಷದಿಂದ ವರ್ಷಕ್ಕೆ ರಾಕೆಟ್ ವೇಗದಲ್ಲಿ ಚಿಮ್ಮುತ್ತಿದೆ ಭಾರತದ ರಕ್ಷಣಾ ರಫ್ತು!
- Advertisement
ಮಳೆಗಾಲದಲ್ಲಿ (Rain) ಭಾಗಮಂಡಲ ಜಲಾವೃತವಾಗುವುದು ಸಾಮಾನ್ಯ. ತ್ರಿವೇಣಿ ಸಂಗಮ (Triveni Sangama) ಮುಳುಗಡೆಯಾದರೆ ತಲಕಾವೇರಿ, ಕೋರಂಗಾಲ, ಅಯ್ಯಂಗೇರಿ, ನಾಪೋಕ್ಲು ಮತ್ತು ಚೇರಂಗಾಲ ಸೇರಿದಂತೆ ಹಲವು ಗ್ರಾಮಗಳ ಸಂಪರ್ಕ ಕಡಿತಗೊಳ್ಳುತ್ತವೆ. ಇದರಿಂದ ಈ ಭಾಗದ ನಿವಾಸಿಗಳು ಮಳೆಗಾಲದಲ್ಲಿ ವಿಪರೀತ ಸಮಸ್ಯೆ ಅನುಭವಿಸುತ್ತಿದ್ದರು. ಈ ಭಾಗದ ಮಕ್ಕಳಿಗೆ ಶಾಲೆಗೆ ತೆರಳಲು ಕೂಡ ಸಮಸ್ಯೆಯಾಗುತ್ತಿತ್ತು. ಇದನ್ನೂ ಓದಿ: ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ
- Advertisement
2019 ರಲ್ಲಿ ಕೋರಂಗಾಲದಲ್ಲಿ ಭೂಕುಸಿತವಾಗಿ ಒಂದೇ ಸ್ಥಳದಲ್ಲಿ 5 ಜನರು ಭೂಸಮಾಧಿಯಾಗಿದ್ದರು. ಈ ದುರ್ಘಟನೆ ಸಂಭವಿಸಿದ ಸ್ಥಳವನ್ನು ತಲುಪಬೇಕಾಗಿದ್ದ ರಕ್ಷಣಾ ಪಡೆಗಳು, ಸ್ಥಳೀಯರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ರಸ್ತೆ ಮುಳುಗಡೆಯಾಗಿದ್ದರಿಂದ ಯಾವುದೇ ವಾಹನಗಳ ಓಡಾಟವೂ ಸಾಧ್ಯವಾಗಿರಲಿಲ್ಲ.
2020 ರ ಆಗಸ್ಟ್ ತಿಂಗಳಲ್ಲೂ ತಲಕಾವೇರಿಯ ಗಜಗಿರಿ ಬೆಟ್ಟ ಕುಸಿದುಬಿದ್ದಿತ್ತು. ಪರಿಣಾಮ ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಆಚಾರ್ ಮತ್ತು ಕುಟುಂಬದ ಐವರು ಭೂ ಸಮಾಧಿಯಾಗಿದ್ದರು. ಆಗಲೂ ಕೂಡ ಬಾರಿ ಮಳೆ ಸುರಿಯುತ್ತಿದ್ದರಿಂದ ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆಯಾಗಿತ್ತು. ಭಾಗಮಂಡಲದಿಂದ ತಲಕಾವೇರಿವರೆಗೆ ಹಲವು ಕಡೆಗಳಲ್ಲಿ ಭೂಕುಸಿತವಾಗಿದ್ದರಿಂದ ಜೆಸಿಬಿ ಮತ್ತು ಇತರೇ ವಾಹನಗಳನ್ನು ತೆಗೆದುಕೊಂಡು ಹೋಗಿ ರಸ್ತೆ ತೆರವು ಮಾಡಲು ಪರದಾಡಬೇಕಾಗಿತ್ತು. ಹೀಗಾಗಿ ಭಾಗಮಂಡಲದಲ್ಲಿದ್ದ ಪ್ರವಾಹದ ನೀರನ್ನು ದಾಟಿ ಮುಂದೆ ಹೋಗಲು ಎರಡು ದಿನಗಳೇ ಕಾಯಬೇಕಾಗಿತ್ತು.
ಹಲವಾರು ದಶಕಗಳಿಂದ ಪ್ರತಿ ಮಳೆಗಾಲದಲ್ಲಿಯೂ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದ ಭಾಗಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರಿಗೆ ಮೇಲ್ಸೇತುವೆ ಕಾಮಗಾರಿ ಮುಕ್ತವಾಗಿದ್ದು ಈಗ ಹರ್ಷದಲ್ಲಿದ್ದಾರೆ.