Districts
ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಕೊಡವರು- ಪ್ರಕರಣ ದಾಖಲಿಸೋ ಎಚ್ಚರಿಕೆ

ಮಡಿಕೇರಿ: ಕೊಡವರು ಗೋಮಾಂಸ ತಿನ್ನುತ್ತಾರೆ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ ಕೊಡವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಅವರು ಸಿದ್ದರಾಮಯ್ಯ ಅಲ್ಲ ಬಿದ್ದರಾಮಯ್ಯ. ಸಿದ್ದರಾಮಯ್ಯ ನಾಲಿಗೆ ಕೊಡವರ ಚಪ್ಪಲಿಗೆ ಸಮ. ಬಾಯಿ ಚಪಲಕ್ಕೆ ಏನೇನೋ ಮಾತನಾಡುತ್ತಿದ್ದಾರೆ. ಒಬ್ಬ ಪ್ರಜ್ಞಾವಂತರಾಗಿ ಹೀಗೆಲ್ಲ ಮಾತನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಗೋವನ್ನು ಪೂಜ್ಯ ಸ್ಥಾನದಿಂದ ಗೌರವಿಸುವ ಕೊಡವರ ಬಗ್ಗೆ ಇಂತಹ ಹೇಳಿಕೆಗಳನ್ನು ನೀಡಿರುವ ಎಂದು ಜಿಲ್ಲಾಧಿಕಾರಿ ಕಚೇರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ: ಸಿದ್ದರಾಮಯ್ಯ
ಕೊಡಗಿನ ಕುಲದೇವತೆ ಕಾವೇರಿ, ಇಗ್ಗುತ್ತಪ್ಪ ಕೊಡವ ಕುಲಕ್ಕೆ ಜೈಕಾರ ಹಾಕಿದ ಪ್ರತಿಭಟನಾಕಾರರು ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ಅಪಮಾನವಾಗಿದೆ. ಅವರ ಹೇಳಿಕೆಗೆ ಬಹಿರಂಗವಾಗಿ ಕೊಡವರನ್ನು ಬಹಿರಂಗವಾಗಿ ಕ್ಷಮೆ ಕೋರಬೇಕು. ಹಾಗೆಯೇ ತಮ್ಮ ಹೇಳಿಕೆಯನ್ನು ಹಿಂಪಡೆಯ ಬೇಕು. ಇಲ್ಲವಾದರೆ ಜಾತಿ ದೌರ್ಜನ್ಯ ಕಾಯ್ದೆ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಮಡಿಕೇರಿಯ ಕೊಡವ ಸಮಾಜ, ಪೋನ್ನಂಪೇಟೆ ಕೊಡವ ಸಮಾಜ ಹಾಗೂ ಮಡಿಕೇರಿ ಹಿತ ರಕ್ಷಣಾ ವೇದಿಕೆಯಿಂದ ಒಕ್ಕೊರಲಿನಿಂದ ಆಗ್ರಹಿಸಿದರು.
