DharwadDistrictsKarnatakaLatestLeading NewsMain Post

ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ: ಕೋಡಿಮಠದ ಶ್ರೀ ಭವಿಷ್ಯ

- ಕೈಯಲ್ಲಿ ಬಡಿಗೆ ಹಿಡಿದು ಹೊರಗಡೆ ಹೋಗೋದು ಒಳ್ಳೆಯದು

– ಚುನಾವಣೆ, ಸರ್ಕಾರದ ಬಗ್ಗೆ ಶ್ರೀಗಳು ಹೇಳಿದ್ದೇನು..?

ಧಾರವಾಡ: ಆಶ್ವಿಜ ಕೊನೆಯಿಂದ ಯುಗಾದಿ (Yugadi) ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠ (KodiMutt) ದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು. ಅದು ಸಂರಕ್ಷಣೆಯಾಗುತ್ತದೆ. ಪ್ರಾರಂಭದಲ್ಲೇ ನಾನು ಮಳೆ (Rain), ಗಾಳಿ, ಗುಡುಗು ಇದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು-ನೋವುಗಳಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದು ಹೇಳಿದ್ದೆ. ಅದರಂತೆ ಇನ್ನೂ ಮುಂದೆ ಮಳೆಯಾಗುವ ಲಕ್ಷಣ ಇದೆ ಎಂದರು.

ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ. ಮಳೆಯಿಂದ, ರೋಗದಿಂದ ಹಾಗೂ ಭೂಮಿಯಿಂದ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಈಗಲೂ ಅಂತಹ ಪರಿಸ್ಥಿತಿದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ ಎಂದು ತಿಳಿಸಿದರು.

ಈ ಸಂವತ್ಸರದ ಕಡೆವರೆಗೂ ಈ ತೊಂದರೆ ಇದೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದೂ ಆಗುತ್ತದೆ ಕಾದು ನೋಡಿ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದೆ. ಅಪಮೃತ್ಯು ಹೆಚ್ಚಿದೆ. ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಒಂದೆಡೆ ಪ್ರಕೃತಿ ವಿಕೋಪ, ಮತಾಂಧತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ ಎಂದರು. ಇದನ್ನೂ ಓದಿ: ದಸರಾ ಹಬ್ಬಕ್ಕೆ ಬೋನಸ್ ಕೊಡಲಿಲ್ಲವೆಂದು ಗ್ರಾಮ ಪಂಚಾಯತ್ ಕಚೇರಿಗೆ ಚಪ್ಪಲಿ ಹಾರ ಹಾಕಿದ ನೌಕರ

ಇನ್ನೊಂದು ವರ್ಷದಲ್ಲಿ ಕೊರೊನಾ (Corona Virus) ಹೋಗುತ್ತದೆ. ಬಳ್ಳಾರಿಯಲ್ಲಿ ಈ ಬಗ್ಗೆ ಹೇಳಿದ್ದೆ. ಕೊರೊನಾ ಹೋಗುತ್ತದೆ. ಹೋಗುವಾಗ ಜಗತ್ತಿಗೆ ವಿಪರೀತ ಕ್ಷಾಮ ಕೊಟ್ಟು ಹೋಗುತ್ತದೆ. ದುಃಖ ಕೊಟ್ಟು ಹೋಗುತ್ತದೆ, ಕುಡಿಯಲು ನೀರು ಇಲ್ಲದಂತೆ ಮಾಡುತ್ತದೆ. ಅಂತಹ ಪ್ರಸಂಗ ಇದೆ. ಕೊರೊನಾ ಈ ವರ್ಷದಲ್ಲಿ ಬಿಡುಗಡೆಯಾಗತ್ತದೆ. ಭವಿಷ್ಯದಲ್ಲಿ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ. ಆದರೆ ಈ ಕೊರೊನಾ ಮೊದಲು ಬಂದಿದ್ದೇ ದೇವರ ಮೇಲೆ. ಮೊದಲು ಮಠ, ಮಾನ್ಯಗಳ ಮೇಲೆ ಬಂತು ಆ ಮೇಲೆ ಮನುಷ್ಯರ ಮೇಲೆ ಬಂತು. ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ. ಬಹಳ ಕಷ್ಟ ಕೊಟ್ಟು ಹೋಗುತ್ತದೆ ಎಂದು ಸ್ವಾಮೀಜಿ ನುಡಿದರು.

ಇದೇ ವೇಳೆ ರಾಜಕೀಯ ಭವಿಷ್ಯ ಬಗ್ಗೆ ಮಾತನಾಡಿ, ಎಲ್ಲರಿಗೂ ಒಳ್ಳೆಯದಾಗಲಿ. ಈಗ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಹೇಳುತ್ತೇನೆ. ರಾಜಕೀಯ (Politics) ಬದಲಾವಣೆ ಬಗ್ಗೆ ಏನೂ ಹೇಳಲು ಹೋಗೋದಿಲ್ಲ ಎಂದು ಹೇಳಿ ಸ್ವಾಮೀಜಿ ನಸುನಕ್ಕರು. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗೋದಿಲ್ಲ. ಅಶುಭವಾಗುತ್ತದೆ.

Live Tv

Leave a Reply

Your email address will not be published. Required fields are marked *

Back to top button