ಬೆಳಗಾವಿ: ಕೇಂದ್ರದಂತೆ ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಇಂದು ಮಧ್ಯಾಹ್ನ 2.30ರೊಳಗೆ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ ಬೇಲಿ ಹಾರಿಯಾದರೂ ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Advertisement
ಬೆಳಗಾವಿಯ ಸುವರ್ಣಸೌಧ ಎದುರಿರುವ ಕೊಂಡಸಕೊಪ್ಪದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ನಾವು ಬೆಳಗ್ಗೆ 11 ಘಂಟೆಯಿಂದ ಕೊಂಡಸಕೊಪ್ಪದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರ ಕೂಡಲೇ ಸ್ಥಳಕ್ಕೆ ಬಂದು ನಮ್ಮ ಜೊತೆಗೆ ಮಾತನಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸುವರ್ಣಸೌಧ ಮುತ್ತಿಗೆ ಯತ್ನ ವಿಫಲ – ಕೋಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರು ಪೊಲೀಸರ ವಶಕ್ಕೆ
Advertisement
Advertisement
ಹರಿಕಥೆ ಕೇಳೋಕೆ ಬಂದಿಲ್ಲ: ಸರ್ಕಾರದ ಪ್ರತಿನಿಧಿಗಳು ಇಲ್ಲಿಗೆ ಬರದಿದ್ದರೆ ನಾವು ಬೇಲಿ ಹಾರಿಯಾದರೂ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ನಮ್ಮನ್ನು ಯಾರು ತಡೆಯುತ್ತಾರೆ ನೋಡುತ್ತೇವೆ. ಪೊಲೀಸರ ಕಣ್ಣು ತಪ್ಪಿಸಿ ಸುವರ್ಣ ಸೌಧಕ್ಕೆ ಹೋಗಲೇಬೇಕು. ನಾವು ಇಲ್ಲಿ ಹರಿಕಥೆ ಕೇಳಲು ಬಂದಿಲ್ಲ, ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪ್ರತಿ ಮನೆಯಲ್ಲೂ ತಲ್ವಾರ್ ಇಟ್ಟುಕೊಂಡು ಗೋವು ರಕ್ಷಣೆ ಮಾಡಿ: ಸಾಧ್ವಿ ಸರಸ್ವತಿ
Advertisement
ತೀವ್ರಗೊಂಡ ರೈತರ ಹೋರಾಟ: ವಿನೂತನವಾಗಿ ಪ್ರತಿಭಟನೆ ಮಾಡಿ ಅನ್ನದಾತರು ಸರ್ಕಾರದ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಡೊಳ್ಳು ಬಾರಿಸಿ, ರೈತಗೀತೆಗಳನ್ನ ಹಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದಾರೆ.