ಬೆಳಗಾವಿ: ನಾಳೆ ನಡೆಯುವ ಅಧಿವೇಶನದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಸುವರ್ಣ ಸೌಧ ಮುತ್ತಿಗೆ ಹಾಕಲಾಗುತ್ತದೆ. ಕೃಷಿ ಕಾಯ್ದೆ ವಾಪಸ್ ಪಡೆಯುವವರೆಗೆ ನಿರಂತರ ಹೋರಾಟ ಮಾಡುತ್ತೇವೆ. ಸುಮ್ಮನೆ ಕೈ ಕಟ್ಟಿ ಕುಳಿತು ಕೊಳ್ಳುವ ಮಾತೇ ಇಲ್ಲ. ಅರೆಸ್ಟ್ ಮಾಡಿದರೂ ಹೆದರಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ರೈತ ವಿರೋಧಿ ಕೃಷಿ ಕಾಯ್ದೆ ಕೇಂದ್ರ ಸರ್ಕಾರವೇ ಹಿಂಪಡೆದಿದೆ. ರಾಜ್ಯ ಸರ್ಕಾರವೂ ಕೂಡಾ ವಾಪಸ್ ಪಡೆಯಬೇಕು. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕೃಷಿ ಕಾಯ್ದೆಯನ್ನ ಜಾರಿಗೊಳಿಸಿದ್ದಾರೆ. ಭಾರತ ಸರ್ಕಾರ ರೈತರ ಒಂದು ವರ್ಷ ಹೋರಾಟ ನೋಡಿ ಕೃಷಿ ಕಾಯ್ದೆ ವಾಪಸ್ ಪಡೆದಿದ್ದಾರೆ. ರಾಜ್ಯ ಸರ್ಕಾರವೂ ಕೂಡ ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯುತ್ತಾರೆ ಅಂತಾ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಈ ಅಧಿವೇಶನದಲ್ಲಿ ಈ ವಿಷಯ ಮಂಡನೆ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೇವೆ. ಆದರೆ ಸರ್ಕಾರದ ನಡುವಳಿಕೆ ಬದಲಾಗಿ ಕಾಣುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು
Advertisement
Advertisement
ಕೇಂದ್ರ ಸರ್ಕಾರ ವಾಪಸ್ ಪಡೆದರೆ ರಾಜ್ಯ ಸರ್ಕಾರ ವಾಪಸ್ ಪಡೆಬೇಕು ಅಂತ ಕಾನೂನು ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಸಚಿವ ಮಾಧುಸ್ವಾಮಿ ರೈತರಿಗೆ ಕಾನೂನು ಪಾಠ ಹೇಳುತ್ತಿದ್ದಾರೆ. ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯದೇ ಇದ್ದರೆ, ಬಿಜೆಪಿ ಕಾರ್ಯಕ್ರಮ ಎಲ್ಲಿ ಇರುತ್ತದೆ ಅಲ್ಲಲ್ಲಿ ಕಪ್ಪು ಬಾವುಟ ಹಿಡಿದು ರೈತರು ಪ್ರತಿಭಟನೆ ಮಾಡುತ್ತೇವೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ದಿಲ್ಲಿ ಮಾದರಿಯ ರೈತ ಹೋರಾಟ ಮಾಡುತ್ತೇವೆ. ಮಹಾಪಂಚಾಯತ ಸಭಾ ಕಾರ್ಯಕ್ರಮ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಇದರ ಪರಿಣಾಮ ಎದುರಿಸಲು ತಯಾರಾಗಬೇಕು. ಎಂದು ಈ ಮುಲಕ ಸಂದೇಶ ನೀಡುತ್ತೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ‘ಬೀಸ್ಟ್’ ಸಿನಿಮಾ ವಿಶೇಷ ಫೋಟೋ ಶೇರ್ ಮಾಡಿದ ಚಿತ್ರತಂಡ