CricketLatestLeading NewsMain PostSports

ವಿಶ್ವಕಪ್ ಬಳಿಕ T20 ಆವೃತ್ತಿಗೆ ಕಿಂಗ್ ಕೊಹ್ಲಿ ವಿದಾಯ?

- ಪಾಕ್ ಮಾಜಿ ಬೌಲರ್ ಶೋಯೆಬ್ ಅಖ್ತರ್ ಹೇಳಿಕೆ

ಮುಂಬೈ: ಟೀಂ ಇಂಡಿಯಾದ (Team India) ರನ್ ಮಿಷಿನ್ ಖ್ಯಾತಿ ವಿರಾಟ್‌ ಕೊಹ್ಲಿ (Virat Kohli) ಇದೇ ಅಕ್ಟೋಬರ್ ನಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ (T20 WorldCup) ಬಳಿಕ ಅಂತಾರಾಷ್ಟ್ರೀಯ ಟಿ20 (International T20) ಆವೃತ್ತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಪಾಕಿಸ್ತಾನದ (Pakistan) ಮಾಜಿ ವೇಗಿ ಶೋಯೆಬ್ ಅಖ್ತರ್ ಭವಿಷ್ಯ ನುಡಿದಿದ್ದಾರೆ.

ವಿರಾಟ್ ಕೊಹ್ಲಿ ಅವರು ಉತ್ತಮ ಲಯದಲ್ಲಿರುವಾಗಲೇ ನಿವೃತ್ತಿ ಘೋಷಿಸಲಿ ಎಂದು ಶಾಹಿದ್ ಅಫ್ರಿದಿ (Shahid Afridi) ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಮತ್ತೊಂದು ಹೇಳಿಕೆ ನೀಡಿರುವ ಶೋಯೆಬ್ ಅಖ್ತರ್ (Shoaib Akhtar) ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

ಮುಂದಿನ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಬಳಿಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು. ಉಳಿದ ಎರಡು ಮಾದರಿಯ ಕ್ರಿಕೆಟ್‌ನಲ್ಲಿ ಹೆಚ್ಚು ಸಮಯ ಆಡುವ ಸಲುವಾಗಿ ವಿರಾಟ್ ಕೊಹ್ಲಿ, ಟಿ20-ಐ ಕ್ರಿಕೆಟ್ ಕೆರಿಯರ್‌ಗೆ ವಿದಾಯ ಹೇಳಲಿದ್ದಾರೆ. ನಾನು ಕೊಹ್ಲಿ ಸ್ಥಾನದಲ್ಲಿ ಇದ್ದಿದ್ದರೆ ಬೃಹತ್ ಮಟ್ಟದಲ್ಲಿ ಆಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಿದ್ದೆ ಅಖ್ತರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಈ ಬಾರಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿದ್ದು, ಅಕ್ಟೋಬರ್ 16 ರಿಂದ ನವೆಂಬರ್ 13ರ ವರೆಗೆ ನಡೆಯಲಿದೆ. ಅದಕ್ಕಾಗಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಾರಥ್ಯದ 15 ಆಟಗಾರರ ಪಟ್ಟಿಯನ್ನು ಬಿಸಿಸಿಐ ಈಗಾಗಲೇ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಭಾರತವನ್ನು ಅಂತಾರಾಷ್ಟ್ರೀಯ ಸಂಶೋಧನಾ ಕೇಂದ್ರವಾಗಿ ರೂಪಿಸಿ – ಗೆಹ್ಲೋಟ್

ಏಷ್ಯಾಕಪ್‌ನೊಂದಿಗೆ ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ 276 ರನ್‌ಗಳನ್ನು ಗಳಿಸಿದರು. ಅಫ್ಘಾನಿಸ್ತಾನದೊಂದಿಗೆ ಉತ್ತಮ ಇನ್ನಿಂಗ್ಸ್ ಆಡಿದ ಕಿಂಗ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ 1,021 ದಿನಗಳ ಬಳಿಕ ಹೊಸ ದಾಖಲೆ ಬರೆದಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button