ಮುಂಬೈ: ಏಷ್ಯಾಕಪ್ ಕ್ರಿಕೆಟ್‍ಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ ರೋಹಿತ್ ಶರ್ಮಾ ಅವರಿಗೆ ತಂಡದ ನಾಯಕತ್ವ ನೀಡಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ ನಡೆಯಲಿರುವ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, 16 ಆಟಗಾರರ ಪಟ್ಟಿಯನ್ನು ಸದ್ಯ ಬಿಸಿಸಿಐ ಬಿಡುಗಡೆ ಮಾಡಿದೆ. ವಿಶೇಷವಾಗಿ ರಾಜಸ್ಥಾನದ ಎಡಗೈ ವೇಗಿ 20 ವರ್ಷದ ಖಲೀಲ್ ಅಹ್ಮದ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Advertisement
Team India for Asia Cup, 2018 announced. Rohit Sharma set to lead the side in UAE #TeamIndia pic.twitter.com/mx6mF27a9K
— BCCI (@BCCI) September 1, 2018
Advertisement
ಆಟಗಾರರ ಪಟ್ಟಿ ಬಿಡುಗಡೆ ಮಾಡಿದ ಮಾತನಾಡಿದ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್, ಕೊಹ್ಲಿ ನಿರಂತರವಾಗಿ ತಂಡದಲ್ಲಿ ಆಡುತ್ತಿರುವ ಹಿನ್ನೆಲೆಯಲ್ಲಿ ವಿಶ್ರಾಂತಿ ನೀಡಲಾಗಿದೆ. ಇದಕ್ಕೂ ಮೊದಲು ಆಯ್ಕೆ ಸಮಿತಿಯ ಸದಸ್ಯರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಸೆ.15 ರಿಂದ ಟೂರ್ನಿ ಆರಂಭವಾಗಲಿದ್ದು, ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮೊದಲು ಬಾಂಗ್ಲಾ ತಂಡವನ್ನು ಎದುರಿಸಲಿದೆ. ಈ ಹಿಂದೆ ಇಂಗ್ಲೆಂಡ್ ಸರಣಿಗೆ ಆಯ್ಕೆ ಆಗುವ ನಿರೀಕ್ಷೆಯಲ್ಲಿದ್ದ ಅಂಬಟಿ ರಾಯುಡು ಯೋ ಯೋ ಟೆಸ್ಟ್ ಫೇಲ್ ಆದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಸರಣಿಯಿಂದ ಕೈಬಿಡಲಾಗಿತ್ತು.
Advertisement
ತಂಡ ಇಂತಿದೆ: ಶಿಖರ್ ಧವನ್ (ಉಪನಾಯಕ), ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ಅಂಬಟಿ ರಾಯುಡು, ಮನೀಷ್ ಪಾಂಡೆ, ಕೇದರ್ ಜಾಧವ್, ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್‍ದೀಪ್ ಯಾದವ್, ಯಜುವೇಂದ್ರ ಚಹಾಲ್, ಅಕ್ಷರ್ ಪಾಟೇಲ್, ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv