ಅಡಿಲೇಡ್: ದಾಖಲೆಯ ಮೇಲೆ ದಾಖಲೆ ನಿರ್ಮಿಸುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶಿಷ್ಟ ಸಾಧನೆ ನಿರ್ಮಿಸಿದ್ದಾರೆ. ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯಗಳನ್ನು ಜಯಿಸಿದ ಏಷ್ಯಾದ ಮೊದಲ ನಾಯಕ ಎನ್ನುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರವಾಗಿದ್ದಾರೆ.
ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯವನ್ನು ಜಯಿಸುವುದರೊಂದಿಗೆ ಈ ಸಾಧನೆ ಮಾಡಿದ ಏಷ್ಯಾದ ಮೊದಲ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿ 2018ರ ವರ್ಷವನ್ನು ಟೀಂ ಇಂಡಿಯಾ ಸ್ಮರಣಿಯವನ್ನಾಗಿಸಿಕೊಂಡಿದೆ.
Advertisement
Advertisement
323 ರನ್ ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ ನಲ್ಲಿ 119.5 ಓವರ್ ಗಳಲ್ಲಿ 291 ರನ್ ಗಳಿಗೆ ಆಲೌಟ್ ಆಯ್ತು. ಈ ಮೂಲಕ ಭಾರತ 31 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.
Advertisement
ಆಸ್ಟ್ರೇಲಿಯಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಇದೂವರೆಗೆ ಗೆದ್ದಿರಲಿಲ್ಲ. ಒಟ್ಟು 11 ಪಂದ್ಯಗಳ ಪೈಕಿ 9ರಲ್ಲಿ ಸೋತಿದ್ದರೆ, 2 ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿತ್ತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಇದೂವರೆಗಿನ ಕನಸನ್ನು ನನಸು ಮಾಡಿಕೊಂಡಿದೆ.
Advertisement
ಸಂಕ್ಷೀಪ್ತ ಸ್ಕೋರ್
ಭಾರತ ಮೊದಲ ಇನ್ನಿಂಗ್ಸ್ – 250/10, 88 ಓವರ್
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ – 235/10, 98.4 ಓವರ್
ಭಾರತ ಎರಡನೇ ಇನ್ನಿಂಗ್ಸ್ – 307/10, 106.5 ಓವರ್
ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ – 291/10, 119.5 ಓವರ್
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv