– ಡಿಸ್ನಿಪ್ಲಸ್ ಹಾಟ್‌ಸ್ಟಾರ್ ನಲ್ಲಿ ಹಿಂದಿನ ಎಲ್ಲಾ ದಾಖಲೆಗಳೂ ಉಡೀಸ್
ಕೋಲ್ಕತ್ತಾ: ಸೂಪರ್ ಸಂಡೇನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದಲ್ಲಿ ಡಿಸ್ನಿಪ್ಲಸ್ ಹಾಟ್‌ಸ್ಟಾರ್ (Disney+ Hotstar) ಏಕಕಾಲಕ್ಕೆ 4.4 ಕೋಟಿ ಜನರಿಂದ ವೀಕ್ಷಣೆ ಕಂಡಿದ್ದು, ಹಿಂದಿನ ಎಲ್ಲಾ ದಾಖಲೆಗಳೂ ಮುರಿದಿವೆ.
ಇದೇ ವಿಶ್ವಕಪ್ ಆವೃತ್ತಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಧರ್ಮಶಾಲಾ ಕ್ರೀಡಾಂಗಣದಲ್ಲಿ ಕಿವೀಸ್ ವಿರುದ್ಧ ನಡೆದ ಪಂದ್ಯದಲ್ಲಿ 4.3 ಕೋಟಿ ಕ್ರಿಕೆಟ್ ಅಭಿಮಾನಿಗಳಿಂದ ವೀಕ್ಷಣೆ ಕಂಡಿತ್ತು. ಆದರಿಂದು 4.4 ಕೋಟಿ ವೀಕ್ಷಣೆ ಕಂಡಿದ್ದು ಹಿಂದಿನ ಎಲ್ಲಾ ದಾಖಲೆಗಳನ್ನ ಉಡೀಸ್ ಮಾಡಿದೆ. ಇದನ್ನೂ ಓದಿ: ನಮ್ಮ ಕ್ರಿಕೆಟ್ ತಂಡ ಮತ್ತೊಮ್ಮೆ ವಿಜಯಶಾಲಿಯಾಗಿದೆ: ಭಾರತದ ಗೆಲುವಿಗೆ ಮೋದಿ ಅಭಿನಂದನೆ
Advertisement
Advertisement
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ಸ್ಫೋಟಕ ಆರಂಭದೊಂದಿಗೆ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗೀಸಿತ್ತು. ಆರಂಭದಲ್ಲಿ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಹರಿಣರ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದ್ದರು. ಆರಂಭಿಕರು ಔಟಾಗುತ್ತಿದ್ದಂತೆ ರನ್ ವೇಗವೂ ಕಡಿಮೆಯಾಯಿತು. ಇದನ್ನೂ ಓದಿ: ಕಾಲಿಗೆ ಬೀಳಬೇಡಪ್ಪ..: ಪಾದ ಮುಟ್ಟಲು ಬಂದ ಯುವ ಅಭಿಮಾನಿಗೆ ಕೊಹ್ಲಿ ಪ್ರೀತಿಯ ಮಾತು: Viral Video
Advertisement
ನಿಧಾನಗತಿಯ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ತಮ್ಮ ಹುಟ್ಟುಹಬ್ಬದಂದೇ 49ನೇ ಏಕದಿನ ಕ್ರಿಕೆಟ್ ಶತಕ ದಾಖಲೆಯನ್ನ ಸಿಡಿಸಿ ಕ್ರಿಕೆಟ್ ದೇವರು ಸಚಿನ್ ದಾಖಲೆಯನ್ನ ಸರಿಗಟ್ಟಿದರು. ಆದ್ರೆ 48.3ನೇ ಓವರ್‌ನಲ್ಲಿ ಕೊಹ್ಲಿ ಶತಕವನ್ನ ಕಣ್ತುಂಬಿಕೊಳ್ಳಲು 4.4 ಕೋಟಿ ವೀಕ್ಷಕರು ಆನ್‌ಲೈನ್ ವೇದಿಕೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ಗೆ ಲಗ್ಗೆಯಿಟ್ಟಿದ್ದರು. ಕೊಹ್ಲಿ 90 ರನ್ ಗಳಿಸುತ್ತಿದ್ದಂತೆ ಲಕ್ಷ ಲಕ್ಷ ಅಭಿಮಾನಿಗಳು ಏಕಾಏಕಿ ಆನ್‌ಲೈನ್ ವೇದಿಕೆಗೆ ಲಗ್ಗೆಯಿಟ್ಟು ಗ್ರೌಂಡ್ ಹೊರಗೂ ಕೊಹ್ಲಿ ಶತಕ ದಾಖಲೆ ಬರೆಯುವಂತೆ ಮಾಡಿದರು. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸುವಾಗ 4.3 ಕೋಟಿ ಅಭಿಮಾನಿಗಳು ವೀಕ್ಷಿಸಿದ್ದರು.
Advertisement
ಭಾರತ ಮತ್ತು ಪಾಕ್ ಪಂದ್ಯದ ವೇಳೆ ರೋಹಿತ್ ಶರ್ಮಾ (Rohit Sharma) ಬ್ಯಾಟಿಂಗ್ ನೋಡಲು 3.5 ಕೋಟಿ ಜನರು ವೀಕ್ಷಣೆ ಮಾಡಿದ್ದು, ಈವರೆಗಿನ ದಾಖಲೆಯಾಗಿತ್ತು. ಈ ಹಿಂದೇ ಇದೇ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ 2023ರ ಐಪಿಎಲ್ ಫೈನಲ್ ಪಂದ್ಯವನ್ನು ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 3.2 ಕೋಟಿ ಜನರಿಂದ ವೀಕ್ಷಣೆ ಕಂಡಿದ್ದು ದಾಖಲೆಯಾಗಿತ್ತು. ಇದನ್ನೂ ಓದಿ: ICC World Cup: 20 ವರ್ಷಗಳ ಬಳಿಕ ಟೀಂ ಇಂಡಿಯಾದ ಸತತ 8ನೇ ಗೆಲುವು
2023ರ ಐಪಿಎಲ್ ಆವೃತ್ತಿಯಲ್ಲಿ ಜಿಯೋಸಿನಿಮಾ ಸತತ 4ನೇ ಬಾರಿಗೆ ತನ್ನದೇ ವೀಕ್ಷಕರ ದಾಖಲೆ ಮುರಿದಿತ್ತು. ಜೊತೆಗೆ 2019ರ ಐಸಿಸಿ ಏಕದಿನ ವಿಶ್ವಕಪ್ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ನಿರ್ಮಿಸಲ್ಪಟ್ಟಿದ್ದ ವಿಶ್ವದಾಖಲೆಗಳೆಲ್ಲವನ್ನೂ ನುಚ್ಚುನೂರು ಮಾಡಿತ್ತು. 2013ರ ವಿಶ್ವಕಪ್ ಪಂದ್ಯವನ್ನು 2.53 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು.
ಏಪ್ರಿಲ್ 17ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ ಎಂ.ಎಸ್ ಧೋನಿ ಅವರ ಆಟ ವೀಕ್ಷಿಸಲು 2.4 ಕೋಟಿ ವೀಕ್ಷಕರು ಜಿಯೋಸಿನಿಮಾದಲ್ಲಿ ಒಟ್ಟಾಗಿ ಸೇರಿದ್ದು ಹಿಂದಿನ ದಾಖಲೆ ಎನಿಸಿತ್ತು. ಅದಕ್ಕೂ ಮುನ್ನ ಏಪ್ರಿಲ್ 12ರಂದು ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಗತವೈಭವ ನೆನಪಿಸುವಂಥ ಬ್ಯಾಟಿಂಗ್ ಪ್ರದರ್ಶಿಸಿದಾಗ ಗರಿಷ್ಠ 2.2 ಕೋಟಿ ವೀಕ್ಷಕರ ದಾಖಲೆ ಕಂಡಿತ್ತು. ಇದನ್ನೂ ಓದಿ: 49th Century: ಕಿಂಗ್ ಕೊಹ್ಲಿ ಬರ್ತ್ ಡೇ ಶತಕ – ಶುಭಾಶಯಗಳ ಸುರಿಮಳೆ!
ಭಾನುವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನತ್ತಿದ್ದ ಭಾರತ ತಂಡ 30.3 ಓವರ್‌ಗಳಲ್ಲೇ 192 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು.