ಕೋಲಾರ: ನಗರಕ್ಕೆ ಭಾರಿ ವಾಹನಗಳಿಗೆ (Heavy Vehicles) ನಿರ್ಬಂಧ ವಿಧಿಸಿ ಕೋಲಾರ (Kolar) ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ಕೋಲಾರ ನಗರದಲ್ಲಿನ ವಾಹನ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ
ಅಗತ್ಯ ಸೇವಾ ಸರಕು ವಾಹನಗಳನ್ನು ಹೊರತುಪಡಿಸಿ ಬಾರಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹಣ್ಣು, ಹೂವು, ತಕರಾರಿ, ಗ್ಯಾಸ್ ಸಿಲಿಂಡರ್, ನೀರಿನ ಟ್ಯಾಂಕರ್ ಹೊರತುಪಡಿಸಿ ಬೇರೆ ವಾಹನಕ್ಕೆ ನಿರ್ಬಂಧ ಹಾಕಲಾಗಿದೆ.
ಕಾರ್ಮಿಕರನ್ನು ಕರೆದೊಯ್ಯುವ ವಾಹನಗಳು ರಸ್ತೆ ಬದಿ ನಿಲ್ಲಿಸದಂತೆ ಡಿಸಿ ತಿಳಿಸಿದ್ದಾರೆ. ನಗರದ ಮಾಲಿನ್ಯ ಹಾಗೂ ವಾಹನ ದಟ್ಟಣೆ ಹೆಚ್ಚಾದ ಪರಿಣಾಮ ಈ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣ ದರ 5% ಏರಿಕೆ – ಫೆ.9 ರಿಂದ ಜಾರಿ

