ಕೋಲಾರ ಜಿಲ್ಲಾಡಳಿತದಿಂದಲೂ ವಕ್ಫ್‌ಗೆ ಸರ್ಕಾರಿ ಜಮೀನು ಮಂಜೂರು ಆರೋಪ

Public TV
2 Min Read
Kolar DC Office

– ಸರ್ಕಾರಿ ಶಾಲೆ, ದೇವಾಲಯ, ಸ್ಮಶಾನಕ್ಕೆ ಮೀಸಲಿಟ್ಟ ಜಮೀನು ಮಂಜೂರು

ಕೋಲಾರ: ರಾಜ್ಯದಲ್ಲಿ ಈಗಾಗಲೇ ವಕ್ಫ್ ವಿವಾದ ತೀವ್ರಗೊಂಡಿದ್ದು, ಕೋಲಾರದಲ್ಲೂ ಸರ್ಕಾರಿ ಆಸ್ತಿಗಳನ್ನು ವಕ್ಫ್ ಮಂಡಳಿಗೆ ಮಂಜೂರು ಮಾಡಿರುವ ಆರೋಪಗಳು ಕೇಳಿ ಬಂದಿವೆ. ಅದರಂತೆ ಗ್ರಾಮಗಳಲ್ಲಿ ಐದು ಗುಂಟೆಯಿಂದ ನಾಲ್ಕೈದು ಎಕರೆವರೆಗೆ ಮಂಜೂರು ಮಾಡಿರುವ ಗಂಭೀರ ಆರೋಪ ಹೊರಿಸಲಾಗಿದೆ.

ಕೋಲಾರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಸರ್ಕಾರಿ ಆಸ್ತಿಯನ್ನು ವಕ್ಫ್ ಬೋರ್ಡ್‌ಗೆ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆಯ ಹತ್ತಾರು ಗ್ರಾಮಗಳಲ್ಲಿ ಮುಸ್ಲಿಂ ಪ್ರಾರ್ಥನಾ ಮಂದಿರ ಹಾಗೂ ಖಬರಾಸ್ಥಾನ್‌ಗಾಗಿ ಮಸೀದಿಗೆ ಜಾಗ ಮೀಸಲು ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಕೋಲಾರ ತಾಲೂಕು, ಮಾಲೂರು, ಶ್ರೀನಿವಾಸಪುರ, ಮುಳಬಾಗಿಲು ತಾಲೂಕುಗಳಲ್ಲಿ ಸರ್ಕಾರಿ ಜಾಗ ಮಂಜೂರು ಮಾಡಿದ್ದು, ಕೋಲಾರ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅಧಿಕಾರ ವಹಿಸಿಕೊಂಡ ನಂತರ ಜಾಗ ಮೀಸಲು ಎಂಬ ಆರೋಪ ಕೇಳಿ ಬಂದಿದೆ. ಗ್ರಾಮಗಳಲ್ಲಿ ಐದು ಗುಂಟೆಯಿಂದ ನಾಲ್ಕೈದು ಎಕರೆವರೆಗೆ ಮಂಜೂರು ಮಾಡಿರುವ ಗಂಭೀರ ಆರೋಪ ಹೊರಿಸಲಾಗಿದೆ. ಅದರಂತೆ 2023ರ ನಂತರ ಅಂದರೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಅಧಿಕಾರ ವಹಿಸಿಕೊಂಡ ನಂತರ ನೂರಾರು ಆಸ್ತಿ ವಕ್ಫ್ ಬೋರ್ಡ್‌ಗೆ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ದೀಪಾವಳಿ ಹಿನ್ನೆಲೆ ಇಂದು 250ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ- ರೈಲ್ವೆ ಇಲಾಖೆ

ಇನ್ನೂ ಮುಸ್ಲಿಮರು ವಾಸವಿಲ್ಲದೆ ಇರುವ ಗ್ರಾಮಗಳಿಗೂ ವಕ್ಫ್ ಬೋರ್ಡ್‌ಗೆ ಜಾಗ ಮಂಜೂರು ಮಾಡಿರುವ ಆರೋಪ ಜಿಲ್ಲಾಧಿಕಾರಿ ವಿರುದ್ಧ ಕೇಳಿ ಬಂದಿದೆ. ಕೋಲಾರ ನಗರದಲ್ಲೂ ಕೋಟ್ಯಂತರ ರೂ. ಬೆಲೆಬಾಳುವ ಆಸ್ತಿಗಳು ವಕ್ಫ್ ಬೋರ್ಡ್‌ನ ಹೆಸರಿಗೆ ಮೀಸಲಿರಿಸಲಾಗಿದೆ. ಕೋಲಾರ ನಗರ ಹಾಗೂ ಗ್ರಾಮೀಣ ಭಾಗದ ಹಲವೆಡೆ ಸರ್ಕಾರಿ ಜಮೀನನ್ನು ವಕ್ಫ್ ಬೋರ್ಡ್‌ಗೆ ಖಾತೆ ಮಾಡುವಂತೆ ತಮ್ಮ ಕಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂಬ ಗಂಭೀರ ಆರೋಪವಿದೆ. ಸರ್ಕಾರಿ ಜಾಗದಲ್ಲಿ ಶಾಲೆಗಳನ್ನು ಕಟ್ಟಿದ್ದರೂ ಸಹ ಅವುಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ಖಾತೆ ಮಾಡಲಾಗಿದೆ ಎಂಬ ಆರೋಪವಿದೆ. ಇದನ್ನೂ ಓದಿ: MUDA Case; ಮುಡಾ ಮಾಜಿ ಆಯುಕ್ತ ನಟೇಶ್‌ ED ವಶಕ್ಕೆ

ಆದರೆ ಆದ್ಯತೆ ಮೇರೆಗೆ ಶಾಲೆಗಳಿಗೆ, ಅಂಗನವಾಡಿ, ಸ್ಮಶಾನಗಳಿಗೆ ನಿವೇಶನ ನೀಡಲಾಗುತ್ತಿದೆ. ನಾವು ಯಾವುದೇ ಖಾತೆಗಳನ್ನು ಮಾಡುತ್ತಿಲ್ಲ. ಇ.ಒ, ಆರ್.ಐ, ತಹಶೀಲ್ದಾರ್ ಅವರು ಮತ್ತು ನಗರಸಭೆ ಆಯುಕ್ತರು ಖಾತೆಗಳನ್ನು ಮಾಡುತ್ತಾರೆ. ಆದರೆ ಜಿಲ್ಲಾಧಿಕಾರಿಗಳು ಯಾವುದೇ ಖಾತೆ ಮಾಡುವುದಿಲ್ಲ ಎಂಬುದು ಜಿಲ್ಲಾಧಿಕಾರಿಗಳ ಮಾತು. ಇನ್ನೂ ಈ ಸಂಬಂಧ ಮಾತನಾಡಿರುವ ಶಾಸಕ ಕೊತ್ತೂರು ಮಂಜುನಾಥ್ ಸರ್ಕಾರಿ ಶಾಲೆ, ದೇವಾಲಯ, ಸ್ಮಶಾನಕ್ಕೆ ಮೀಸಲಿಟ್ಟ ಜಾಗವನ್ನು ವಕ್ಫ್ ಮಂಡಳಿಗೆ ಮಂಜೂರು ಮಾಡಿದರೆ ಸಿಎಂ ಬಳಿ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಆಯುಷ್ಮಾನ್ ಭಾರತ್ ಯೋಜನೆ 70 ವರ್ಷ ಮೇಲ್ಪಟ್ಟ ಎಲ್ಲರಿಗೂ ವಿಸ್ತರಣೆ – ದೆಹಲಿ, ಪಶ್ಚಿಮ ಬಂಗಾಳ ಜನರಿಗೆ ಸಿಗಲ್ಲ ಸೌಲಭ್ಯ

Share This Article