ಕೋಲಾರ: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ ಎಂದು ಕೋಲಾರದಲ್ಲಿ (Kolar) ಕಾಂಗ್ರೆಸ್ (Congress) ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಮಾಡಿದರು. ಬಜೆಟ್‌ನಲ್ಲಿ ಕೋಲಾರಕ್ಕೆ ಮೆಡಿಕಲ್ ಕಾಲೇಜು, ಕೆಜಿಎಫ್‌ನಲ್ಲಿ ಹೈಟೆಕ್ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ರಸ್ತೆ ಅಭಿವೃದ್ದಿಗೆ 300 ಕೋಟಿ ರೂ., ಎತ್ತಿನಹೊಳೆ ಯೋಜನೆಗೆ 556 ಕೋಟಿ ರೂ. ನೀಡಿರುವ ಸಿಎಂಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್
ಕೋಲಾರಕ್ಕೆ ಯಾವುದೇ ಅನುದಾನ ನೀಡಿಲ್ಲ, ಯಾವುದೇ ಅಭಿವೃದ್ಧಿ ಮಾಡಿಲ್ಲ ಎನ್ನುವ ವಿರೋಧಿಗಳೇ ಇತ್ತ ನೋಡಿ ಎಂದು ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡುವ ಮೂಲಕ ಟಾಂಗ್ ನೀಡಿದರು. ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ, ಬಜೆಟ್‌ನಲ್ಲಿ ಹೆಚ್ಚು ಯೋಜನೆಗಳನ್ನ ತಂದುಕೊಟ್ಟ ಜಿಲ್ಲೆಯ ಸಚಿವರಿಗೆ, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ ಸಾಧ್ಯತೆ