ಕೋಲಾರ: ರಾತ್ರಿ 10 ಗಂಟೆ ಬಳಿಕ ಯಾವುದೇ ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ, ಮೂರ್ತಿ ವಿಸರ್ಜನೆ ವೇಳೆ ಡಿಜೆಗೆ ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ಕಡ್ಡಾಯ ಎಂದು ಕೋಲಾರ ಎಸ್ಪಿ ಡಿ.ದೇವರಾಜ್ ಹೇಳಿದರು.
ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮುಖಂಡರ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ. ವೆಂಕಟ್‍ರಾಜ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ, ಗಣೇಶ ಪ್ರತಿಷ್ಠಾಪನೆ ಸೇರಿದಂತೆ ಗಣೇಶೋತ್ಸವದ ಎಲ್ಲಾ ಕಾರ್ಯಕ್ರಮದಲ್ಲೂ, ಅದಕ್ಕೆ ಬೇಕಾದ ಅನುಮತಿ ಹಾಗೂ ಗಣೇಶ ಮೂರ್ತಿ ವಿಸರ್ಜನೆ ಕುರಿತು ಕೆಲ ಮಾನದಂಡಗಳನ್ನು ವಿಧಿಸಲಾಯಿತು.
Advertisement
Advertisement
ಇನ್ನು ಈ ಬಾರಿಯೂ ಎಂದಿನಂತೆ ಶಾಂತಿ ಹಾಗೂ ಭಕ್ತಿಯಿಂದ ಆಚರಣೆ ಮಾಡಲು ಬೇಕಾದ ಅಗತ್ಯ ನಿರೀಕ್ಷಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಇನ್ನೂ ಪೊಲೀಸ್, ಬೆಸ್ಕಾಂ, ಪಿಡಬ್ಲ್ಯೂಡಿ ಇಲಾಖೆಗಳ ಅನುಮತಿ ಕಡ್ಡಾಯವಾಗಿದೆ ಎಂದು ತಿಳಿಸಿದರು. ನಾನು ರಾಗಿ ಕದ್ದಿಲ್ಲ- ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಿವಲಿಂಗೇಗೌಡ
Advertisement
3 ಹಾಗೂ 5 ದಿನಗಳು ಪ್ರತಿಷ್ಠಾಪನೆ ಮಾಡುವವರಿಗೆ ಯಾವುದೆ ನಿರ್ಬಂಧವಿಲ್ಲ. ಆದರೆ ರಾತ್ರಿ 10 ಗಂಟೆ ಬಳಿಕ ಯಾವುದೇ ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ. ಡಿಜೆಗೆ ನಿಗದಿತ ಮಾನದಂಡಗಳನ್ನು ವಿಧಿಸಲಾಗುವುದು ಎಂದು ಎಸ್ಪಿ ಡಿ.ದೇವರಾಜ್ ಮಾಹಿತಿ ನೀಡಿದರು. ಮುರುಘಾ ಕೇಸ್ – ಮಠಕ್ಕೆ ಕರೆದೊಯ್ದು ಸ್ಥಳ ಮಹಜರು