ಕೋಲಾರ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂವರು ಅರೋಪಿಗಳನ್ನು ಕೋಲಾರ ನಗರದ ಗಲ್‍ಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುವ ಪೊಲೀಸರು ಮೂರು ಜನರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಗಂಗಮ್ಮನ ಪಾಳ್ಯದಲ್ಲಿ ಇರಿಸಿದ್ದ ಗಣೇಶನ ಮೆರವಣಿಗೆ ವೇಳೆ ಬಿಲ್ಲಾಲ್ ಪ್ರಾರ್ಥನ ಮಂದಿರದ ಬಳಿ ಕಲ್ಲು ತೂರಾಟ ನಡೆದಿತ್ತು, ಈ ವೇಳೆ ಇಬ್ಬರು ಯುವಕರಿಗೆ ಗಾಯಗಳಾಗಿತ್ತಲ್ಲದೆ, ಗಣೇಶ ಮೂರ್ತಿಗೆ ಹಾನಿಯಾಗಿತ್ತು.
Advertisement
Advertisement
ಈ ಸಂಬಂಧ ಹಿಂದೂಪರ ಸಂಘಟನೆ ಮುಖಂಡರು ಪ್ರಕರಣ ದಾಖಲು ಮಾಡಿ ಆರೋಪಿಗಳನ್ನು ಬಂಧಿಸುವವರೆಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವುದಿಲ್ಲ ಎಂದು ಕುರುಬರ ಪೇಟೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಸ್ಥಳಕ್ಕೆ ಬಂದ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.
Advertisement
ಸದ್ಯ ಮೂರು ಜನ ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು, ಐಪಿಸಿ ಸೆಕ್ಷನ್ 506, 324, 295, 149 ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಕೂಡ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.