ಕೋಲಾರ: ವ್ಯಕ್ತಿಯೊಬ್ಬ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಪತ್ನಿಯನ್ನ ಕೊಲೆಗೈದು ತಾನೂ ನೇಣಿಗೆ ಶರಣಾದ ಘಟನೆ ಕೋಲಾರ ತಾಲೂಕಿನ ಕನ್ನಸಂದ್ರ ಗ್ರಾಮದಲ್ಲಿ ನಡೆದಿದೆ.
ಕನ್ನಸಂದ್ರ ಗ್ರಾಮದ ನಿವಾಸಿ ಮೋಹನ್ (30) ಹಾಗೂ ಪದ್ಮಾ (25) ಮೃತ ದಂಪತಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೋಹನ್ ಪತ್ನಿಯನ್ನು ಕೊಲೆಗೈದಿದ್ದಾನೆ ಎನ್ನಲಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Advertisement
Advertisement
ಮೋಹನ್ ಹಾಗೂ ಪದ್ಮಾ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಅನ್ಯೋನ್ಯವಾಗಿದ್ದ ದಂಪತಿಯ ಮಧ್ಯೆ ಶನಿವಾರ ರಾತ್ರಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿತ್ತು. ಇದರಿಂದ ಕೋಪಗೊಂಡ ಮೊಹನ್ ಪತ್ನಿಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಪದ್ಮಾ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ. ಈ ವಿಷಯ ತಿಳಿದು ಗಾಬರಿಗೊಂಡ ಮೋಹನ್ ಕೂಡ ರೂಮ್ನಲ್ಲೇ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡಿದ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮೋಹನ್ ಮೃತದೇಹವನ್ನು ಕೋಲಾರ ಜಿಲ್ಲಾಸ್ಪತ್ರೆಗೆ ಹಾಗೂ ಪದ್ಮಾ ಮೃತದೇಹವನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದಂಪತಿಯ ಸಾವಿಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ.