Connect with us

Cinema

ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ

Published

on

ಕೋಲಾರ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ಹೇರಿದೆ.

ಕೋಲಾರ ಜಿಲ್ಲೆಯ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಚಿತ್ರೀಕರಣ ನಡೆಯುತ್ತಿದ್ದು, ದುಬಾರಿಯ ಸೆಟ್ ಹಾಕಲಾಗಿದೆ. ಆದರೆ ಶ್ರೀನಿವಾಸ್ ಎಂಬವರು ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಕೆಜಿಎಫ್ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ಕೋರ್ಟ್ ತಡೆಯಾಜ್ಞೆ ನೀಡಿದೆ.

ಕೆಜಿಎಫ್ ಸಿನಿಮಾ ಭರ್ಜರಿ ಗೆಲುವು ಸಾಧಿಸಿ, ಪ್ರೇಕ್ಷಕರ ಮನ ಗೆದ್ದಿತ್ತು. ಸದ್ಯ ಕೆಜಿಎಫ್- 2 ಸಿನಿಮಾ ನೋಡಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಚಿತ್ರತಂಡವು ಏಪ್ರಿಲ್‍ನಲ್ಲಿ ಆಡಿಷನ್ ನಡೆಸಿ ಕಲಾವಿದರನ್ನು ಆಯ್ಕೆ ಮಾಡಿಕೊಂಡಿದೆ. ಮೇ ತಿಂಗಳು ಚಿತ್ರೀಕರಣ ಆರಂಭವಾಗಿದ್ದು, ಶೇ.60 ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ.

ಈ ಮಧ್ಯೆ ಶ್ರೀನಿವಾಸ್ ಅವರು ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ಕೋರ್ಟ್ ಮೆಟ್ಟಿಲೇರಿದ್ದಾರೆ. ಮನವಿಯನ್ನ ಆಲಿಸಿದ ಕೋರ್ಟ್, ಚಿತ್ರೀಕರಣಕ್ಕೆ ತಡೆಯಾಜ್ಞೆ ಹೊರಡಿಸಿದೆ.

ಕೆಜಿಎಫ್ 2 ಸಿನಿಮಾದಲ್ಲಿ ಬಾಲಿವುಡ್ ಹಿರಿಯ ನಟ ಸಂಜಯ್ ದತ್ ಅವರು ಅಧೀರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಫಸ್ಟ್ ಲುಕ್ ಫೋಟೋವನ್ನು ಚಿತ್ರತಂಡವು ಜುಲೈ 29ರಂದು ರಿವೀಲ್ ಮಾಡಿತ್ತು.