ಕೋಲಾರ: ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆ(ಡಿಎಆರ್)ಯ ಮುಖ್ಯ ಪೇದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಕೆಜಿಎಫ್ ಡಿಎಆರ್ ಮುಖ್ಯ ಪೇದೆ ದಿವಾಕರ್ ಅತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಡಿಎಆರ್ ಎಎಸ್‍ಐ ಶ್ರೀನಿವಾಸಯ್ಯ ಹಾಗೂ ಆರ್ ಪಿಐ ಮಂಜುನಾಥ್ ಡ್ಯೂಟಿ ಕೊಡುವ ವಿಚಾರದಲ್ಲಿ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
Advertisement
Advertisement
ಎಂದಿನಂತೆ ಇಂದು ಕೂಡ ಕೆಲಸಕ್ಕೆ ಹಾಜರಾದ ವೇಳೆ ದಿವಾಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದರಿಂದ ಬೇಸತ್ತು ದಿವಾಕರ್ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಕೋಲಾರದ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಆಸ್ಪತ್ರೆಗೆ ಎಸ್‍ಪಿ, ಡಿವೈಎಸ್‍ಪಿ ಶ್ರೀನಿವಾಸಮೂರ್ತಿ ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.
Advertisement
ದಿವಾಕರ್ ಅವರು ಈ ಮೊದಲು ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್.ಎನ್ ನಾರಾಯಣಸ್ವಾಮಿಗೆ ಗನ್ ಮ್ಯಾನ್ ಆಗಿ ಕಾರ್ಯನಿರ್ವಹಿಸಿದ್ದರು.