ಕೋಲಾರ: ಅಪ್ರಾಪ್ತೆಯನ್ನು ಮದುವೆಯಾಗಿ 3 ಮಕ್ಕಳ ತಂದೆಯಾಗಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ (Kolar) ಜಿಲ್ಲೆ ಕೆಜಿಎಫ್ ತಾಲ್ಲೂಕು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಪ್ರಾಪ್ತ ಬಾಲಕಿಯನ್ನು ಆರೋಪಿ ಪ್ರೀತಿಸಿ ಮದುವೆಯಾಗಿದ್ದ. ಮೂರನೇ ಮಗುವಿನ ಹೆರಿಗೆಗೆ ಹೋದಾಗ ಆಸ್ಪತ್ರೆ ಸಿಬ್ಬಂದಿ ಅನುಮಾನಗೊಂಡು ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದರು. ಆಧಾರ್ ಕಾರ್ಡ್ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
19 ವರ್ಷಕ್ಕೆ ಮೂರು ಮಕ್ಕಳ ತಾಯಿಯಾಗಿದ್ದಾಳೆ. ಕಳೆದ ಎರಡು ಬಾರಿ ಹೆರಿಗೆ ವೇಳೆ ಆಕೆಯ ಪತಿ ನಕಲಿ ಆಧಾರ್ ಕಾರ್ಡ್ ನೀಡಿದ್ದ. ಪತಿ ಸತೀಶ್ ವಿರುದ್ದ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.
