ಕೋಲಾರ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಬೆಮೆಲ್ ನೌಕರರು ನಡೆಸುತ್ತಿರುವ ಪ್ರತಿಭಟನೆ 22ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆ ಬೆಮೆಲ್ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು (Rajnath Singh) ಕೋಲಾರ (Kolar) ಸಂಸದ ಮಲ್ಲೇಶ್ ಬಾಬು (Mallesh Babu) ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬೆಮೆಲ್ ಕಾರ್ಮಿಕರ ಸಮಸ್ಯೆಗಳನ್ನು ಈಡೇರಿಸುವಂತೆ ಮನವಿ ಮಾಡಿರುವ ಸಂಸದರಿಗೆ ಸಚಿವರ ಕಾರ್ಯಾಲಯ ಉತ್ತಮವಾಗಿ ಸ್ಪಂದಿಸಿದ್ದು, ಆದಷ್ಟು ಬೇಗ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಬ್ರಿಟಿಷರನ್ನು ಒದ್ದೊಡಿಸಿದ ಕಾಂಗ್ರೆಸ್‌ಗೆ ಬಿಜೆಪಿ ಯಾವ ಲೆಕ್ಕ? – ಶಿವರಾಜ್ ತಂಗಡಗಿ
Advertisement
ನವದೆಹಲಿಯ ಕೇಂದ್ರ ಕಚೇರಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಂಸದ ಮಲ್ಲೇಶ್ ಬಾಬು, ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿರುವ ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರಿಗೆ ವಿವರಿಸಿದ್ದಾರೆ. ಸತತ 22 ದಿನಗಳಿಂದ ಬೆಮೆಲ್ ಕಾರ್ಮಿಕರು ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲಿಸಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕರಡಿ ಉಪಟಳ – ಮನೆಯಿಂದ ಹೊರಬರಲು ಜನ ಹಿಂದೇಟು
Advertisement
Advertisement
ಈಗಾಗಲೇ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿಯವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದು, ಬೆಮೆಲ್ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ ರಕ್ಷಣಾ ಸಚಿವರ ಬಳಿ ಚರ್ಚಿಸುವ ಬಗ್ಗೆ ತಿಳಿಸಿದ್ದರು. ರಕ್ಷಣಾ ಸಚಿವರು ತಕ್ಷಣ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚರ್ಚಿಸಿದ್ದರು. ಅದರಂತೆ ಸಂಸದರ ಮನವಿಯನ್ನು ಸ್ವೀಕರಿಸಿರುವ ರಕ್ಷಣಾ ಸಚಿವರು ಎಲ್ಲಾ ಅಧಿಕಾರಿ ವರ್ಗದವರೊಂದಿಗೆ ಚರ್ಚಿಸಿ ಇನ್ನು 2-3 ದಿನಗಳಲ್ಲಿ ಬೆಮೆಲ್ ಕಾರ್ಮಿಕರ ಸಮಸ್ಯೆಗಳಿಗೆ ಸಂಪೂರ್ಣ ಪರಿಹಾರ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ಒಡೆದ ಮನೆಯಾಯ್ತು ಪಂಚಮಸಾಲಿ ಮೀಸಲಾತಿ ಹೋರಾಟ – ಯತ್ನಾಳ್, ಶ್ರೀಗಳ ವಿರುದ್ಧ ಕಾಶಪ್ಪನವರ್ ಕಿಡಿ
Advertisement