ಕೋಲಾರದಲ್ಲಿ ವಸತಿ ಶಾಲೆ ಕರ್ಮಕಾಂಡ – ನಾಲ್ವರ ವಿರುದ್ಧ FIR, ಪ್ರಾಂಶುಪಾಲೆ ಸೇರಿ ಇಬ್ಬರು ಅರೆಸ್ಟ್

Public TV
2 Min Read
KLR 2

ಕೋಲಾರ: ವಸತಿ ಶಾಲೆ (Residential School) ಮಕ್ಕಳನ್ನ ಮಲದ ಗುಂಡಿ (Toilet Pond )ಸ್ವಚ್ಚಗೊಳಿಸಲು ಇಳಿಸಿದ್ದು ಹಾಗೂ ಬಾಲಕಿಯರ ಬಟ್ಟೆ ಬದಲಿಸುವ ವೀಡಿಯೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂರೆ ನಾಲ್ವರ ಮೇಲೆ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಒಬ್ಬರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಇಬ್ಬರನ್ನ ಬಂಧಿಸಿರುವ ಪೊಲೀಸರು (Kolar Police) ಇನ್ನೂ ಮೂವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಪ್ರಿನ್ಸಿಪಾಲ್ ಅರೆಸ್ಟ್: ಮಾಲೂರಿನ ಯಲವಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿ, ಬಾಲಕಿಯರ ಕೊಠಡಿಯಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಹಾಗೂ ಮಲಗಿದ್ದ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಕರಣವೂ ಬೆಳಕಿಗೆ ಬಂದಿದೆ.

KOLAR ARREST

ಮೂವರು ವಿದ್ಯಾರ್ಥಿನಿಯರ (School Students) ವೀಡಿಯೋ ಮಾಡಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರಿಗೆ ತಿಳಿದಾಗ ದಂಗಾಗಿದ್ದಾರೆ. ವಿಚಾರ ಬೆಳಕಿಗೆ ಬಂದೊಡನೆ ಪೋಷಕರು ಶಾಲೆಗೆ ಧಾವಿಸಿ ಪ್ರತಿಭಟನೆ ಮಾಡಿದ್ದಾರೆ. ಈ ಬಗ್ಗೆ `ಪಬ್ಲಿಕ್ ಟಿವಿ’ ಜೊತೆ ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಇಲ್ಲಿನ ಶಿಕ್ಷಕರು ಮತ್ತು ಸಿಬ್ಬಂದಿ, ಹೆಣ್ಣುಮಕ್ಕಳು ಬಟ್ಟೆ ಬದಲಿಸುವ ದೃಶ್ಯಗಳನ್ನು ಸೆರೆಹಿಡಿದು ಬೇರೆಯವರಿಗೆ ಕಳಿಸುತ್ತಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.

KOLAR ARREST 1

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕ್ರೈಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ನವೀನ ಕುಮಾರ್ ರಾಜು, ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಮುನಿಯಪ್ಪ, ವಾರ್ಡನ್ ಮಂಜುನಾಥ್‌ನನ್ನು ಅಮಾನತ್ತು ಮಾಡಲಾಗಿದೆ. ವಿದ್ಯಾರ್ಥಿನಿಯ ಖಾಸಗಿ ವೀಡಿಯೋಗಳ ಬಗ್ಗೆ ಗಮನಕ್ಕೆ ಬಂದಿದೆ. ಕೂಡಲೇ ಇದರ ಹಿಂದೆ ಇರುವ ಜಾಲದ ಕುರಿತು ಪರಿಶೀಲನೆ ಮಾಡಲಾಗುವುದು. ಪೊಲೀಸ್ ಇಲಾಖೆ ಈಗಾಗಲೇ ಪ್ರಕರಣ ದಾಖಲು ಮಾಡಿಕೊಂಡಿದೆ. ಇಲ್ಲಿರುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾವಣೆ ಮಾಡಲಾಗುವುದು. ಮಕ್ಕಳು ಮತ್ತು ಪೋಷಕರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಪೋಷಕರು ನವೀನ್ ಕುಮಾರ್ ರಾಜು ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೇ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲ ಗುಂಡಿಗೆ ಇಳಿಸಿದ ವಿಚಾರವಾಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದಾಖಲಿಸಿದ ದೂರಿನಡಿ 4 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬAಧ ಪ್ರಾಂಶುಪಾಲೆ ಭಾರತಮ್ಮ ಮತ್ತು ಸಹ ಶಿಕ್ಷಕ ಮುನಿಯಪ್ಪನನ್ನು ಮಾಸ್ತಿ ಪೊಲೀಸರು ಬಂಧಿಸಿದ್ದಾರೆ. ವಾರ್ಡನ್ ಮಂಜುನಾಥ್ ಹಾಗೂ ಅತಿಥಿ ಶಿಕ್ಷಕ ಅಭಿಷೇಕ್ ಪರಾರಿಯಾಗಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ.

ಆರೋಪಿಗಳ ವಿರುದ್ಧ ಮಲ ಹೊರುವ ಪದ್ದತಿ ನಿಷೇಧ ಕಾಯ್ದೆ, ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

Share This Article