– ಹಾಲಿನ ದರ ಏರಿಕೆ ಸುಳಿವು ನೀಡಿದ ಶಾಸಕ
ಕೋಲಾರ: ಮಂತ್ರಿ ಸ್ಥಾನ ಬೇಕೆಂಬುದು ನಮ್ಮ ಜಿಲ್ಲೆಯ ಜನರ ನೋವಾಗಿದೆ. ಕೋಲಾರ (Kolar) ಜಿಲ್ಲೆಗೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು. ಮಂತ್ರಿ ಸ್ಥಾನಕ್ಕೆ ನಾನು ಅರ್ಹನಿದ್ದೇನೆ ಎಂದು ಮಾಲೂರು ಶಾಸಕ ಕೆವೈ ನಂಜೇಗೌಡ (KY Nanjegowda) ಹೇಳಿದ್ದಾರೆ.
Advertisement
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರಿದ್ದೇವೆ. ಒಬ್ಬರಿಗೆ ಮಂತ್ರಿ ಸ್ಥಾನ ಬೇಕು. ಮಂತ್ರಿ ಸ್ಥಾನ ನೀಡುವಂತೆ ನಾನು ಮನವಿ ಮಾಡಿದ್ದೇನೆ. ಮಾಲೂರು ತಾಲೂಕಿನಲ್ಲಿ ನಾನು ಕಾಂಗ್ರೆಸ್ ಕಟ್ಟಿ ಬೆಳೆಸಿದ್ದೇನೆ. ತುಂಬಾ ಕಷ್ಟದಲ್ಲಿ ಎರಡನೇ ಬಾರಿ ಆಯ್ಕೆಯಾಗಿದ್ದೇನೆ. ಕೋಲಾರ ಜಿಲ್ಲೆಯ ಶಾಸಕರು ಮಂತ್ರಿ ಸ್ಥಾನ ಕೇಳಿದ್ದೇವೆ. ಯಾರಿಗೆ ಕೊಟ್ಟರೂ ನನಗೆ ಒಪ್ಪಿಗೆ. ಮಂತ್ರಿ ಸ್ಥಾನ ನೀಡುವ ನಿರ್ಧಾರ ಸಿಎಂ, ಡಿಸಿಎಂ ಹಾಗು ಹೈಕಮಾಂಡ್‌ಗೆ ಬಿಡುವೆ ಎಂದರು. ಇದನ್ನೂ ಓದಿ: ಭೂ ಪರಿಹಾರ ವಿಳಂಬ – ಸಂತ್ರಸ್ತ ರೈತರಿಂದ ಎಸಿ ಕಚೇರಿ ವಸ್ತುಗಳ ಜಪ್ತಿ
Advertisement
ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿನ ಗುಂಪುಗಾರಿಕೆ ಕೆಟ್ಟದಾಗಿದೆ. ಬೇರೆ ಯಾವ ರಾಜ್ಯದಲ್ಲೂ ಹೀಗೆ ಗುಂಪುಗಾರಿಕೆ ಇಲ್ಲ. ದೇಶದಲ್ಲಿ ಬಿಜೆಪಿ ಪ್ರಭಾವ ದಿನೇ ದಿನೇ ಕುಸಿಯುತ್ತಿದೆ. ಇತ್ತೀಚಿಗೆ ನಡೆದ ರಾಜ್ಯ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ರಾಜ್ಯಾಧ್ಯಕ್ಷರ ವಿರುದ್ಧವೇ ಸೀನಿಯರ್ ಎಂಎಲ್‌ಎಗಳೇ ಹೋರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸುಭದ್ರ ಸರ್ಕಾರ ಇದೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ನಮ್ಮ ಹೈಕಮಾಂಡ್ ಬಲಿಷ್ಠವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ – ಅಶೋಕ್‌ಗೆ ಡಿಕೆಶಿ ಪ್ರಶ್ನೆ
Advertisement
Advertisement
ರಾಜ್ಯದಲ್ಲಿ ಹಾಲಿನ ದರ ಏರಿಕೆ ವಿಚಾರದ ಕುರಿತು ಮಾತನಾಡಿ, ಸಿಎಂ ಸಿದ್ದರಾಮಯ್ಯ ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜ್ಯದಲ್ಲಿ 5 ರೂ. ದರ ಏರಿಕೆಗೆ ಒತ್ತಾಯ ಇದೆ. 5 ರೂ. ದರ ಏರಿಸಿ 5 ರೂ. ರೈತರಿಗೆ ನೀಡಬೇಕು ಎಂಬುದು ಒತ್ತಾಯ. ಶೀಘ್ರದಲ್ಲೇ ಹಾಲು ದರ ಏರಿಕೆಯಾಗುವ ಸಾಧ್ಯತೆಯಿದೆ ಎಂದು ದರ ಏರಿಕೆಯ ಸುಳಿವು ನೀಡಿದರು. ಇದನ್ನೂ ಓದಿ: ಓಟದ ಅಭ್ಯಾಸ ಮಾಡುತ್ತಿರುವಾಗ 14ರ ಬಾಲಕ ಹೃದಯಾಘಾತದಿಂದ ಸಾವು