ಕೋಲಾರ: ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ರದ್ದು ಪಡಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಟಿಪ್ಪು ಸೆಕ್ಯುಲರ್ ಸೇನೆ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು.
ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ಅಲ್ಪಸಂಖ್ಯಾತ ವಿರೋಧಿ ನೀತಿಯನ್ನು ಖಂಡಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತ ಪಡಿಸಿದರು.
Advertisement
Advertisement
ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಮೈಸೂರು ಕೆಆರ್‍ಎಸ್ ನಿರ್ಮಾಣ ಮಾಡುವಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದ ಟಿಪ್ಪು ಜಯಂತಿಯನ್ನು ಆಚರಣೆ ನಿಷೇಧಿಸಿರುವುದು ಖಂಡನೀಯ. ಈ ಕೂಡಲೇ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಪಡಿಸಿರುವುದನ್ನು ಹಿಂಪಡೆದು ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಅನುಮತಿ ನೀಡಿ ಸ್ವಾತಂತ್ರ್ಯ ಹೋರಾಟಗಾರನಿಗೆ ಸಿಗಬೇಕಾದ ಗೌರವವನ್ನು ನೀಡಬೇಕು ಎಂದು ಒತ್ತಾಯಿಸಿದರು.
Advertisement
Advertisement
ಈ ಕೂಡಲೇ ಸರ್ಕಾರದ ತನ್ನ ಆದೇಶವನ್ನ ವಾಪಸ್ ಪಡೆಯಬೇಕು ಇಲ್ಲವಾದಲ್ಲಿ ಸಿಎಂ ಯಡಿಯೂರಪ್ಪ ಅವರು ಹೋದ ಕಡೆಯಲೆಲ್ಲ ಕಪ್ಪು ಪಟ್ಟಿ ಪ್ರದರ್ಶನ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.