ಕೋಲಾರ: ವಿಶ್ವಸಂಸ್ಥೆಯ (United Nations) ಮಾನವ ಹಕ್ಕು ಸಮಿತಿ ಯುಎನ್‌ಹೆಚ್‌ಆರ್‌ಸಿಗೆ (Special Repporeteur) ಏಷ್ಯಾದಿಂದಲೇ ಪ್ರಥಮ ಬಾರಿಗೆ ಕೋಲಾರ ಜಿಲ್ಲೆಯ ಮಹಿಳೆ ಡಾ.ಕೆ.ಪಿ ಅಶ್ವಿನಿ (Dr. KP Ashwini) ನೇಮಕವಾಗಿದ್ದಾರೆ.
ಕೋಲಾರ (Kolar) ತಾಲೂಕಿನ ಕಸಬಾ ಕುರುಬರಹಳ್ಳಿ ಗ್ರಾಮದ ವಿ. ಪ್ರಸನ್ನ ಕುಮಾರ್ ಹಾಗೂ ಜಯಮ್ಮ ದಂಪತಿಯ ಜೇಷ್ಠ ಪುತ್ರಿ ಕೆ.ಪಿ ಅಶ್ವಿನಿ ಯವರು ತಮ್ಮ ಪದವಿ ವಿಧ್ಯಾಭ್ಯಾಸವನ್ನು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು, ಸ್ನಾತಕೋತ್ತರ ಪದವಿಯನ್ನು ಸೇಂಟ್ ಜೋಸೆಫ್ ಕಾಲೇಜು ಹಾಗೂ ಎಂ.ಪಿಲ್, ಪಿಹೆಚ್.ಡಿ ಪದವಿಯನ್ನು ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಪಡೆದಿದ್ದಾರೆ.
Advertisement
Advertisement
ಅಶ್ವಿನಿ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಕೆಲ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದು, ನಂತರ ಅಮೃಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯಲ್ಲಿ ಸೇವೆ ಮಾಡುತ್ತಾ ಒಡಿಸ್ಸಾ ಮತ್ತು ಛತ್ತೀಸ್‌ಗಢ ರಾಜ್ಯಗಳ ಆದಿವಾಸಿಗಳ ಪ್ರದೇಶಗಳಲ್ಲಿ ಗಣಿಗಾರಿಕೆಯಿಂದ ಅವರ ಮೇಲೆ ಬೀರಿರುವ ಪರಿಣಾಮಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ್ದಾರೆ. ಇದನ್ನೂ ಓದಿ: ತಕ್ಷಣ ಉಕ್ರೇನ್‌ನಿಂದ ಹೊರಟುಬಿಡಿ – ವಿದ್ಯಾರ್ಥಿಗಳು, ನಾಗರಿಕರಿಗೆ ಭಾರತ ತುರ್ತು ಸಲಹೆ
Advertisement
ಕಳೆದ 4 ವರ್ಷಗಳಿಂದ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅಶ್ವಿನಿ, ಮೂಲತಃ ಅಂಬೇಡ್ಕರ್‌ವಾದಿಯಾಗಿದ್ದು, ದಲಿತ ಚಳುವಳಿಗಳಲ್ಲಿ ಕರ್ನಾಟಕ ಮತ್ತು ವಿದೇಶಗಳಲ್ಲಿ ಹೋರಾಟದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.
Advertisement
ಪ್ರಸ್ತುತ ಇವರು ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ಯುಎನ್‌ಹೆಚ್‌ಆರ್‌ಸಿ (Special Repporeteur)ಗೆ ನೇಮಕವಾಗಿದ್ದಾರೆ. ಜಿನೀವಾ ಮೂಲದ 47 ಸದಸ್ಯರ ವಿಶ್ವಸಂಸ್ಥೆಯ ಮಾನವ ಹಕ್ಕು ಸಂಸ್ಥೆ, ಡಾ. ಅಶ್ವಿನಿ ಅವರ ನೇಮಕಾತಿಯನ್ನು ಅನುಮೋದಿಸಿದೆ. ಇದೀಗ ಅಶ್ವಿನಿ ವರ್ಣಬೇಧ, ಕೈನೋಫೋಬಿಯಾ ಅಸಹಿಷ್ಣುತೆಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಲಿದ್ದಾರೆ.
ಕೋಲಾರ ಜಿಲ್ಲೆಯ ನಿವಾಸಿ ಡಾ.ಕೆ.ಪಿ ಅಶ್ವಿನಿ ಅವರು ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ಯುಎನ್‌ಹೆಚ್‌ಆರ್‌ಸಿಗೆ ನೇಮಕವಾಗಿರುವುದು ಕೋಲಾರ ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯವಾಗಿದೆ. ಇವರು ಇನ್ನಷ್ಟು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಲಿ ಎಂದು ಕೋಲಾರ ಜಿಲ್ಲೆಯ ಜನತೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ದೀಪಾವಳಿಯಲ್ಲಿ ನಿಷೇಧಿತ ಪಟಾಕಿ ಸಿಡಿಸಿದ್ರೆ 6 ತಿಂಗಳು ಜೈಲು ಶಿಕ್ಷೆ