ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘ ಕೋಚಿಮುಲ್ ಕೊನೆಗೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕವಾಗಿದೆ.
Advertisement
ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸಿ ಸಚಿವ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. ಕೆಲ ನಿರ್ದೇಶಕರು ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಒತ್ತಾಸೆಯಂತೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಜಿಲ್ಲೆಯ ಕೆಲ ನಾಯಕರಿಗೆ ಇದರಿಂದ ಹಿನ್ನೆಡೆಯಾಗಿದೆ. ಇದನ್ನೂ ಓದಿ: 119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
Advertisement
ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೋಚಿಮುಲ್ ವಿಭಜನೆಗೆ ಅನುಮೋದನೆ ನೀಡುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಬಹುದಿನದ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಸಹಕಾರ ಸಚಿವ ಶ್ರೀ ಎಸ್.ಟಿ. ಸೋಮಶೇಖರ್ ಹಾಗೂ ಎಲ್ಲ ಸಂಪುಟ ಸಹೋದ್ಯೋಗಿಗಳಿಗೆ ಜಿಲ್ಲೆಯ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. pic.twitter.com/JqHz250iDx
— Dr Sudhakar K (@mla_sudhakar) November 8, 2021
Advertisement
ಕಳೆದ ಒಂದು ವರ್ಷದಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ನಾಯಕರ ಮಧ್ಯೆ ಒಕ್ಕೂಟ ವಿಭಾಗದ ವಿಚಾರವಾಗಿ ಮುಸುಕಿನ ಗುದ್ದಾಟ ನಡೆಯುತಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸುವ ತೀರ್ಮಾನ ಮಾಡಿದ್ದು, ಲಕ್ಷಾಂತರ ರೈತರಿಂದ ಕಟ್ಟಿದ ಒಕ್ಕೂಟ ಇಂದು ಪ್ರತ್ಯೇಕವಾಗುವ ಮೂಲಕ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ
Advertisement