ಕೋಲಾರ: ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕೋಲಾರ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರರನ್ನು ವರ್ಗಾವಣೆ ಮಾಡಿ ಭಾನುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತ್ರಿಲೋಕಚಂದ್ರರನ್ನು ನೋಂದಣಿ ಮಹಾ ನಿರೀಕ್ಷಕರು ಹಾಗೂ ಮುದ್ರಾಂಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ವರ್ಗಾವಣೆಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಲಾಬಿ ಇದ್ದು ತಮ್ಮ ಆಪ್ತ ಮಾಲೂರು ಕಾಂಗ್ರೆಸ್ ಮುಖಂಡ ನಂಜೇಗೌಡ ಭೂ ವಿವಾದಕ್ಕೆ ಜಿಲ್ಲಾಧಿಕಾರಿ ಸ್ಪಂದಿಸುತ್ತಿಲ್ಲ ಹೀಗಾಗಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಿ ವರ್ಗಾವಣೆ ಮಾಡಿಸಿದ್ದಾರೆ ಎನ್ನಲಾಗಿದೆ.
Advertisement
ಜಿಲ್ಲಾಧಿಕಾರಿ ತ್ರಿಲೋಕಚಂದ್ರ ದಕ್ಷ ಅಧಿಕಾರಿಯಾಗಿದ್ದು ಉತ್ತಮ ಸೇವೆ, ಸರ್ಕಾರದ ಸೌಲಭ್ಯಗಳನ್ನ ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ ಯಾರ ಲಾಬಿಗೂ ಮಣಿಯುತ್ತಿರಲಿಲ್ಲ. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆಗೆ ಡ್ಯಾಮೇಜ್ ಆಗದಂತೆ ತಮ್ಮ ಮೂಗಿನ ನೇರಕ್ಕೆ ಕೆಲಸ ಮಾಡುವ ಅಧಿಕಾರಿಗೆ ಮಣೆ ಹಾಕಿದ್ದಾರೆ ಅನ್ನೋ ಚರ್ಚೆ ನಡೆಯುತ್ತಿವೆ.
Advertisement
ಕಳೆದ ಹಲವು ವರ್ಷಗಳಿಂದ ಕೋಲಾರ ಜಿಲ್ಲೆಯಲ್ಲಿ ಯಾವೊಬ್ಬ ಜಿಲ್ಲಾಧಿಕಾರಿಯೂ ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸಿಲ್ಲ. ಪ್ರಭಾವಿ ಮುಖಂಡರು ಹಾಗೂ ಜನಪ್ರತಿನಿಧಿಗಳ ಅಕ್ರಮಗಳಿಗೆ ಕಡಿವಾಣ ಹಾಕಲು ಹೋದವರಿಗೆ ಉಳಿಗಾಲವಿಲ್ಲ ಅನ್ನೋದು ಇದೀಗ ಮತ್ತೊಮ್ಮೆ ಸಾಬೀತಾಗಿದೆ.
Advertisement
Advertisement