– ಓವರ್ ಟೇಕ್ ಮಾಡಲು ಹೋಗಿ ಚಾಲಕನಿಂದ ಯಡವಟ್ಟು
ಚಿತ್ರದುರ್ಗ: ಓವರ್ ಟೇಕ್ ಮಾಡಲು ಹೋಗಿ ಲಾರಿಗೆ (Lorry) ಕಾರು ಗುದ್ದಿದ ಪರಿಣಾಮ ಕೊಲ್ಲಾಪುರದ DySP ವೈಷ್ಣವಿ ಅವರಿದ್ದ ಕಾರು ಅಪಘಾತಕ್ಕೀಡಾಗಿ (Car Accident) ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗದ (Chitradurga) ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ನಡೆದ ಭೀಕರ ಅಪಘಾತದಲ್ಲಿ ವೈಷ್ಣವಿ ಅವರ ತಾಯಿ ಕಮಲ ಹರಿಬಾಬು (65), ಚಾಲಕ ರಾಕೇಶ್ (40) ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಡಿವೈಎಸ್ಪಿ ವೈಷ್ಣವಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಅವರನ್ನ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ
ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಡಿವೈಎಸ್‌ಪಿ ಆಗಿರುವ ವೈಷ್ಣವಿ ಅವರಿದ್ದ ಇನ್ನೋವಾ ಕಾರು ಮಹಾರಾಷ್ಟ್ರದಿಂದ ಬೆಂಗಳೂರು ಕಡೆಗೆ ಹೊರಟಿತ್ತು. ಈ ವೇಳೆ ಚಾಲಕ ಓವರ್ ಟೇಕ್ ಮಾಡುವ ಅವಸರದಲ್ಲಿ ಲಾರಿಗೆ ಗುದ್ದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಮೂವರಿಗೆ ಗಾಯ
ಘಟನೆ ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯ | ಅಂತರ ಜಿಲ್ಲಾ ಖದೀಮರ ಬಂಧನ – 31 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ



