– ಪ್ರೀತಿ ಹೆಸರಲ್ಲಿ ಹಣಕ್ಕಾಗಿ ಬ್ಲ್ಯಾಕ್ ಮೇಲ್
ಕೋಲ್ಕತ್ತಾ: ಯುವತಿಯರಿಗೆ ನಂಬಿಸಿ ಮೋಸ ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಉದ್ಯಮಿಗಳನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳಕ್ಕೆ ಸೇರಿದ ಆದಿತ್ಯ ಅಗರ್ವಾಲ್, ಅನೀಶ್ ಬಂಧಿತ ಆರೋಪಿಗಳು. ಇಬ್ಬರು ಸ್ನೇಹಿತರಾಗಿದ್ದು, ಯುವತಿಯರನ್ನು ನಂಬಿಸಿ ತಮ್ಮೊಂದಿಗೆ ಅವರನ್ನು ರಹಸ್ಯ ಸ್ಥಳಗಳಿಗೆ ಕರೆದುಕೊಂಡು ಹೋಗುತ್ತಿದ್ದರು. ಪ್ರೀತಿ ಹೆಸರಿನಲ್ಲಿ ನಂಬಿಸಿ ಅವರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಈ ವೇಳೆ ರಹಸ್ಯ ಸ್ಥಳಗಳಲ್ಲಿ ಮೊದಲೇ ಕ್ಯಾಮೆರಾ ಅಳವಡಿಸಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಆ ಬಳಿಕ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಯುವತಿಯರಿಂದ ಹಣ ವಸೂಲಿ ಮಾಡುತ್ತಿದ್ದರು.
Advertisement
Advertisement
2013ರಿಂದಲೇ ಇಂತಹ ಕೃತ್ಯ ನಡೆಸುತ್ತಿದ್ದ ಆರೋಪಿಗಳು 2018 ರಿಂದ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದರು. ಈ ವಿಡಿಯೋಗಳನ್ನು ತೋರಿಸಿ ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಆರೋಪಿಗಳಿಂದ ಬ್ಲ್ಯಾಕ್ ಮೇಲ್ ಗೆ ಒಳಗಾದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆ ಬಳಿ ಮೊದಲು 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಆಕೆ ಹಣವನ್ನು ನೀಡುತ್ತಿದಂತೆ ಮತ್ತೆ 10 ಲಕ್ಷ ರೂ. ನೀಡುವಂತೆ ಒತ್ತಾಯ ಮಾಡಿದ್ದರು.
Advertisement
ಮಹಿಳೆಯ ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರಿಗೆ ಶಾಕ್ ಕಾದಿತ್ತು. ಮೊದಲು ಅನೀಶ್‍ನನ್ನು ಬಂಧಿಸಿದ್ದ ಪೊಲೀಸರಿಗೆ ವಿಚಾರಣೆ ವೇಳೆ ಆದಿತ್ಯ ಬಗ್ಗೆ ಮಾಹಿತಿ ಲಭಿಸಿತ್ತು. ಇಬ್ಬರನ್ನು ಬಂಧಿಸಿದ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿ ಕೋರ್ಟ್ ಎದುರು ಹಾಜರುಪಡಿಸಿದ್ದಾರೆ. ಪೊಲೀಸರು ಬಂಧನದ ವೇಳೆ ಆರೋಪಿಗಳಿಂದ ಲ್ಯಾಪ್‍ಟಾಪ್ ವಶಕ್ಕೆ ಪಡೆದಿದ್ದು, ಇದರಲ್ಲಿ 180ಕ್ಕೂ ಹೆಚ್ಚು ಸೆಕ್ಸ್ ವಿಡಿಯೋಗಳು ಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. 2019 ನವೆಂಬರ್ ನಿಂದ ಆರೋಪಿಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಸದ್ಯ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇದನ್ನು ಓದಿ: ಹಳೆ ಗೆಳೆಯನನ್ನು ಮರೆಯಲು 2ನೇ ಲವ್- ಮೋಸ ಹೋಗಿ ವಿಷ ಸೇವಿಸಿದ ಯುವತಿ