– ಬ್ಲೂಟೂತ್ ನೀಡಿತು ಕಾಮುಕನ ಸುಳಿವು!
– ಆರೋಪಿಗೆ ಮರಣ ದಂಡನೆ ವಿಧಿಸಲು ದೀದಿ ಆಗ್ರಹ
ಕೋಲ್ಕತ್ತಾ: ಸ್ನಾತಕೋತ್ತರ ತರಬೇತಿ ವೈದ್ಯೆಯ (Trainee Doctor) ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿ ಸಂಜಯ್ ರಾಯ್‌ನನ್ನು 14 ದಿನಗಳವರೆಗೆ ಪೊಲೀಸ್ (Kolkata Police) ಕಸ್ಟಡಿಗೆ ಒಪ್ಪಿಸಿದೆ. ತನಿಖೆಯಲ್ಲಿ ಸ್ಫೋಟಕ ರಹಸ್ಯಗಳು ಬಯಲಾಗಿವೆ.
ಪೊಲೀಸ್ ಕಸ್ಟಡಿಗೆ ಪಡೆದು ಆರೋಪಿ ವಿಚಾರಣೆ ನಡೆಸುತ್ತಿದ್ದ ವೇಳೆ ಆತನ ಮೊಬೈಲ್‌ನಲ್ಲಿ ಪೋರ್ನ್ ವೀಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇದು ಮೋದಿ ಭಾರತ, ಬಾಂಗ್ಲಾದೇಶದಂತಹ ಪರಿಸ್ಥಿತಿ ಉಂಟಾಗಲ್ಲ; ಕಾಂಗ್ರೆಸ್‌ಗೆ ಶೇಖಾವತ್ ತಿರುಗೇಟು
Advertisement
Advertisement
ಸಿಸಿಟಿವಿಯಲ್ಲಿ ದೃಶ್ಯ ಸೆರೆ:
ಮೂಲಗಳ ಪ್ರಕಾರ, ಆರೋಪಿ ಸಂಜಯ್ ರಾಜ್ ಖಾಸಗಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದ. ಇದರಿಂದ ಅನೇಕರು ಅವರನ್ನು ಫ್ರೆಂಡ್ಸ್ ಆಫ್ ಪೊಲೀಸ್ ಎಂದೂ ಜನ ಕರೆಯುತ್ತಿದ್ದರು. ಬಂಗಾಳ ಪೊಲೀಸರ ಸಹಕಾರಕ್ಕಾಗಿ ಪ್ರಬಲ ಪೊಲೀಸ್ ಕಲ್ಯಾಣ ಮಂಡಳಿಯ ಭಾಗವಾಗಿ ರಚಿಸಿದ್ದ ತಂಡದಲ್ಲಿ ರಾಯ್ ಇದ್ದ. ಇದರಿಂದ ಆಸ್ಪತ್ರೆಗೆ ಪ್ರವೇಶಿಸಲು ಸುಲಭವಾಗಿ ಪ್ರವೇಶ ಸಿಕ್ಕಿತ್ತು. ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ರಾಯ್ ಆಸ್ಪತ್ರೆ ಒಳಗೆ ಹೋಗಿರುವುದು ಸಿಸಿಟಿವಿ (CCTV) ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
Advertisement
ಬ್ಲೂಟೂತ್ ನೀಡಿದ ಸುಳಿವು:
ಕಾಮುಕ ಸಂಜಯ್ ರಾಯ್ ವಿಚಾರಣೆ ವೇಳೆ, ಎಲ್ಲ ಶಂಕಿತರ ಮೊಬೈಲ್‌ಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ನಂತರ ಪರಿಶೀಲನೆ ವೇಳೆ ಸಿಕ್ಕ ಬ್ಲೂಟೂತ್, ಇಯರ್ ಫೋನ್ ಅನ್ನು ಎಲ್ಲ ಶಂಕಿತರ ಮೊಬೈಲ್ ಫೋನ್‌ಗಳೊಂದಿಗೆ ಲಿಂಕ್ ಮಾಡಲು ಪ್ರಯತ್ನಿಸಿದರು. ಈ ವೇಳೆ ಬ್ಲೂಟೂತ್ ಮತ್ತು ಇಯರ್ ಫೋನ್ ಆರೋಪಿ ಸಂಜಯ್ ರಾಯ್‌ನ ಮೊಬೈಲ್ ಫೋನ್‌ಗೆ ಸ್ವಯಂಚಾಲಿತವಾಗಿ ಕನೆಕ್ಟ್ ಆಗಿದೆ. ಇದನ್ನೇ ಸಾಕ್ಷಿಯನ್ನಾಗಿ ಪರಿಗಣಿಸಿದ ಪೊಲೀಸರು ಆತನನ್ನ ಅಲ್ಲೇ ವಶಕ್ಕೆ ಪಡೆಸಿದ್ದಾರೆ. ಪೊಲೀಸ್ ತಂಡವು ವಿಚಾರಣೆ ನಡೆಸಿದಾಗ, ಸಂಜಯ್ ಆರಂಭದಲ್ಲಿ ವಿಭಿನ್ನ ಹೇಳಿಕೆಗಳನ್ನು ನೀಡಿದ್ದರೂ, ನಂತರ ತಗಲಾಕ್ಕೊಂಡಿದ್ದಾನೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಮರಣ ದಂಡನೆಗೆ ದೀದಿ ಆಗ್ರಹ:
ಅತ್ಯಾಚಾರ ಆರೋಪಿಗೆ ಮರಣದಂಡನೆ ವಿಧಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನ್ಯಾಯಾಲಯಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್ ಹಬ್ಬಕ್ಕಿಂದು ಅದ್ಧೂರಿ ತೆರೆ – ಭಾರತದ ಧ್ವಜಧಾರಿಯಾಗಲಿದ್ದಾರೆ ಮನು ಭಾಕರ್
ಏನಿದು ಕೇಸ್?
ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿರುವುದು ಗೊತ್ತಾಗಿತ್ತು. ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹವು ರಕ್ತದ ಕಲೆಗಳ ಸಹಿತ ಹಾಸಿಗೆಯ ಮೇಲೆ ಬಿದ್ದಿರುವುದು ಪತ್ತೆಯಾಗಿತ್ತು. ಜೊತೆಗೆ ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತ ಹರಿಯುತ್ತಿತ್ತು. ಘಟನೆ ಬೆಳಕಿಗೆ ಬಂದ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರಣೋತ್ತರ ಪರೀಕ್ಷೆ ನಡೆಸಿದಾಗ ಮಹಿಳಾ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ವರದಿಯಲ್ಲಿ ಬಹಿರಂಗವಾಯಿತು.
ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ:
ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿಯನ್ನು 14 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಮತ್ತು 103ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸೀಲ್ಲಾ ನ್ಯಾಯಾಲಯದ ಎದುರು ಆರೋಪಿಯನ್ನು ಹಾಜರುಪಡಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ 14 ದಿನಗಳವರೆಗೆ ಪೊಲೀಸ್ ವಶಕ್ಕೆ ನೀಡುವಂತೆ ಪ್ರಾಸಿಕ್ಯೂಷನ್ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದರು. ಇದನ್ನೂ ಓದಿ: ಕೇಂದ್ರ ಸರ್ಕಾರವು ಕೇರಳ ಜೊತೆಗಿದೆ: ವಯನಾಡು ಭೂಕುಸಿತ ಸಂತ್ರಸ್ತರಿಗೆ ಮೋದಿ ಅಭಯ
ವ್ಯಾಪಕ ಪ್ರತಿಭಟನೆ:
ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಕೋಲ್ಕತ್ತಾದ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿದ್ದಾರೆ.