ಕೋಲ್ಕತ್ತಾ: ಕೋಲ್ಕತ್ತಾದ (Kolkata) ಪರ್ಣಶ್ರೀ (Parnashree) ಪ್ರದೇಶದಲ್ಲಿ ತಂದೆ, ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಗಳ ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪಶ್ಚಿಮ ಬಂಗಾಳದ (West Bengal) ದಕ್ಷಿಣ 24 ಪರಗಣ ಜಿಲ್ಲೆಯ ರಾಮೇಶ್ವರಪುರ ನಿವಾಸಿಗಳಾದ ಸಜನ್ ದಾಸ್ (53), ಶ್ರೀಜಾ ದಾಸ್ (22) ತಂದೆ, ಮಗಳು ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಮಲಾ ಪೌಲ್ ಪ್ಯಾಂಟ್‌ಲೆಸ್ ಫೋಟೋಶೂಟ್ ನೋಡಿ ಕಾಲೆಳೆದ ನೆಟ್ಟಿಗರು
- Advertisement -
- Advertisement -
ಸಜನ್, ಚಿಮಣಿ ಹಾಗೂ ವಾಟರ್ ಪ್ಯೂರಿಫೈಯರ್‌ಗಳ ರಿಪೇರಿ ಮಾಡುವ ಕೆಲಸವನ್ನು ಮಾಡುತ್ತಿದ್ದರು. ಮಗಳು ಶ್ರೀಜಾ ಹುಟ್ಟಿನಿಂದಲೇ ಆಟಿಸಂ ಖಾಯಿಲೆಯಿಂದ ಬಳಲುತ್ತಿದ್ದರಿಂದ ನಿರಂತರ ಔಷಧಿಗಳನ್ನು ಪಡೆಯುತ್ತಿದ್ದಳು. ಸಜನ್ ತಮ್ಮ ಮಗಳ ಅನಾರೋಗ್ಯದ ಬಗ್ಗೆ ಮತ್ತು ವೈದ್ಯಕೀಯ ಖರ್ಚಿನ ಬಗ್ಗೆ ಚಿಂತಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 15 ವರ್ಷ ಹಳೆಯ ವಾಹನಗಳಿಗೆ ಇನ್ಮುಂದೆ ಸಿಗಲ್ಲ ಪೆಟ್ರೋಲ್, ಡೀಸೆಲ್ – ದೆಹಲಿಯಲ್ಲಿ ಹೊಸ ರೂಲ್ಸ್
- Advertisement -
ಸಜನ್ ಫೆ.28 ರಂದು ಮಗಳನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಧ್ಯಾಹ್ನ ಆಸ್ಪತ್ರೆಗೆ ತಲುಪಿರುವ ಬಗ್ಗೆ ಪತ್ನಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಸಜನ್, ಪತ್ನಿಯ ಕರೆ ಸ್ವೀಕರಿಸದಿದ್ದಾಗ ಗಾಬರಿಗೊಂಡ ಪತ್ನಿ ಕುಟುಂಬದ ಸ್ನೇಹಿತ ರಂಜಿತ್ ಕುಮಾರ್ ಸಿಂಗ್‌ಗೆ ಮಾಹಿತಿ ನೀಡಿದ್ದರು. ರಂಜಿತ್, ಸಜನ್ ಅಂಗಡಿ ಬಳಿ ತೆರಳಿ ಬಾಗಿಲು ತೆರೆದಾಗ ತಂದೆ, ಮಗಳು ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ. ಬಳಿಕ ಅವರು ಸಜನ್ ಪತ್ನಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಾ.8 ರಿಂದ ಮಣಿಪುರದ ಮುಕ್ತ ಸಂಚಾರಕ್ಕೆ ಅಮಿತ್ ಶಾ ಸೂಚನೆ
- Advertisement -
ಘಟನಾ ಸ್ಥಳಕ್ಕೆ ಪರ್ಣಶ್ರೀ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಪೊಲೀಸರು, ವರದಿಗಳ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.