ಕೋಲ್ಕತ್ತಾ: 6 ವರ್ಷದ ಬಾಲಕಿಯನ್ನು 19 ವರ್ಷದ ಯುವಕನೋರ್ವ ಬಾತ್‍ರೂಮಿನಲ್ಲಿ ಕೂಡಿಹಾಕಿ ಅತ್ಯಾಚಾರ ಮಾಡಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಈ ಘಟನೆ ಗುರುವಾರ ನಡೆದಿದ್ದು, ಕೋಲ್ಕತ್ತಾದ ತಾರತಾಲ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಬಾತ್‍ರೂಮ್ ಒಳಗೆ ಕೂಡಿಹಾಕಿಕೊಂಡು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರ ಮಾಡಿದ 19 ವರ್ಷದ ಯುವಕನನ್ನು ಅರೆಸ್ಟ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement
Advertisement
ಯುವಕ ಬಾಲಕಿಯ ನೆರೆ ಮನೆಯವನಾಗಿದ್ದು, ಬಾಲಕಿಯನ್ನು ಕರೆದುಕೊಂಡು ಹೋಗಿ ಈ ರೀತಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯು ಮನೆಗೆ ಬಂದು ಈ ವಿಚಾರವನ್ನು ತನ್ನ ತಾಯಿಗೆ ಹೇಳಿದೆ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಾಯಿ ನೀಡಿದ ದೂರಿನ ಮೇರೆಗೆ ನಾವು ಆರೋಪಿಯನ್ನು ಅರೆಸ್ಟ್ ಮಾಡಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
Advertisement
ಈಗ ಆರೋಪಿಯನ್ನು ನಾವು ವಶಕ್ಕೆ ಪಡೆದಿದ್ದು, ಬಾಲಕಿಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ನಂತರ ಮುಂದಿನ ತನಿಖೆಯನ್ನು ಆರಂಭ ಮಾಡುತ್ತೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.