ಕೋಲ್ಕತ್ತಾ: ಕೊರೊನಾ (Corona) ಲಾಕ್‍ಡೌನ್ ನಂತರ ಐಟಿ ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರಿಗೆ ವರ್ಕ್ ಫ್ರಮ್ ಹೋಮ್ (Work From Home) ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ವರ (Groom) ತನ್ನ ಮದುವೆಯ ದಿನವೂ ಮಂಟಪದಲ್ಲಿ ಲ್ಯಾಪ್‍ಟಾಪ್ ಹಿಡಿದುಕೊಂಡು ಕೆಲಸ ಮಾಡುತ್ತಿದ್ದಾನೆ.
ಕೋಲ್ಕತ್ತಾದ (Kolkata) ವರನೊಬ್ಬ ಪುರೋಹಿತರೊಂದಿಗೆ ಕುಳಿತು ತನ್ನ ಮದುವೆ ಕಾರ್ಯದ ಜೊತೆಗೆ ಲ್ಯಾಪ್‍ಟಾಪ್‍ನಲ್ಲಿ (Laptop) ಕೆಲಸವನ್ನು ಮಾಡುತ್ತಿದ್ದಾನೆ. ಇತ್ತ ಪುರೋಹಿತರು ವಿಧಿವಿಧಾನಗಳನ್ನು ನೆರವೇರಿಸಿ ವರನನ್ನು ಆಶೀರ್ವದಿಸುತ್ತಿದ್ದಾರೆ. ಆದರೆ ವರ ಪುರೋಹಿತರ ಕಡೆಗೆ ನೋಡದೇ ಆತ ತನ್ನ ಲ್ಯಾಪ್‍ಟಾಪ್‌ನಲ್ಲಿ ಕೆಲಸ ಮಾಡುತ್ತ ಮಗ್ನನಾಗಿದ್ದಾನೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Advertisement
View this post on Instagram
Advertisement
ಈ ಫೋಟೋವನ್ನು ಹಂಚಿಕೊಂಡಿರುವ ಇನ್‍ಸ್ಟಾಗ್ರಾಮ್ ಪೇಜ್ ಮದುವೆ ಸಮಯದಲ್ಲೂ ವರ್ಕ್ ಫ್ರಮ್ ಹೋಮ್ ಕೆಲಸ ಮಾಡುವ ಸ್ನೇಹಿತನನ್ನು ಟ್ಯಾಗ್ ಮಾಡಿ ಎಂದು ತಿಳಿಸಿದೆ. ವರ ಲ್ಯಾಪ್‍ಟಾಪ್‍ನಲ್ಲಿ ನಿಖರವಾಗಿ ಏನು ಕೆಲಸ ಮಾಡುತ್ತಿದ್ದಾನೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಕೆಲವರು ಆಫೀಸ್ ಕೆಲಸ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರು ನಗರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ 40 ಸಾವಿರ ಹೆಸರು ಮಾಯ
Advertisement
Advertisement
ಕೆಲವರು ಈ ಫೋಟೋ ನೋಡಿ ಹಾಸ್ಯ ಮಾಡಿದ್ದರೇ, ಇನ್ನೂ ಕೆಲವರು ಟೀಕಿಸಿದ್ದಾರೆ. ನೆಟ್ಟಿಗನೊಬ್ಬ ಕಾಮೆಂಟ್ ಮಾಡಿದ್ದು, ಈ ವ್ಯಕ್ತಿಗೆ ತನ್ನ ಸ್ವಂತ ವಿವಾಹವನ್ನು ಆನಂದಿಸಲು ಸಹ ಆಗುತ್ತಿಲ್ಲ ಎಂದು ಹೇಳಿದ್ದಾನೆ. ಮತ್ತೊಬ್ಬ ಕಾಮೆಂಟ್ ಮಾಡಿ, ನನಗೆ ಇದು ತಮಾಷೆಯಾಗಿ ಕಾಣುತ್ತಿಲ್ಲ. ಯಾವುದೇ ಸಂಸ್ಥೆಯು ಉದ್ಯೋಗಿಯನ್ನು ಅವರ ಮದುವೆಯ ದಿನಗಳಲ್ಲಿ ಕೆಲಸ ಮಾಡಲು ಕೇಳುವುದಿಲ್ಲ ಎಂದಾತ ಅವನು ಮದುವೆಯಾಗುವ ಮಹಿಳೆಯನ್ನು ದೇವರು ಆಶೀರ್ವದಿಸುತ್ತಾನೆ ಎಂದು ವ್ಯಂಗ್ಯವಾಡಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪೊಲೀಸ್ ಪೇದೆ ಪತ್ನಿ ಅನುಮಾನಾಸ್ಪದ ಸಾವು