ಕೋಲ್ಕತಾ: ಕ್ರಿಕೆಟಿಗ ಅಭಿಷೇಕ್ ಪೊರೆಲ್ (Abhishek Porel) ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ತಕ್ಷಣ ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ (Kolkata High Court) ಆದೇಶ ನೀಡಿದೆ.
ಕ್ರಿಕೆಟಿಗ ಅಭಿಷೇಕ್ ಪೊರೆಲ್ ವಿರುದ್ಧ ಅತ್ಯಾಚಾರ, ಬೆದರಿಕೆ ಹಾಗೂ ಇತರ ಗಂಭೀರ ಆರೋಪಗಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ತಕ್ಷಣ ಬಂಧಿಸುವಂತೆ ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿದ್ದು, ಬಳಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.ಇದನ್ನೂ ಓದಿ: ಸ್ಪೇನ್‌ನ ಒಂದು ಗೋಲ್‌ನಿಂದ ಮಿಯಾ ಖಲೀಫಾಗೆ ಸಿಕ್ತು 15.92 ಕೋಟಿ!
ಈ ದೂರಿನ ಆಧಾರದ ಮೇಲೆ ಅತ್ಯಾಚಾರ, ಹಲ್ಲೆ, ಕ್ರಿಮಿನಲ್ ಬೆದರಿಕೆ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ವಿಚಾರಣೆ ವೇಳೆ ಕಲ್ಕತ್ತಾ ಹೈಕೋರ್ಟ್ ಅಭಿಷೇಕ್ ಪೊರೆಲ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ಇನ್ನೊಂದೆಡೆ, ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ಅಭಿಷೇಕ್ ಪೊರೆಲ್ ತಳ್ಳಿಹಾಕಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಗ್ಲಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ – ಕೇವಲ 10 ವಿಭಾಗಳಲ್ಲಿ ಸ್ಪರ್ಧೆ
