ನವದೆಹಲಿ: ಕೋಲ್ಕತ್ತಾದ (Kolkata Doctor Rape-Murder) ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ. ಸಂದೀಪ್ ಘೋಷ್ (Sandip Ghosh) ಅವರ ಸದಸ್ಯತ್ವವನ್ನು ಭಾರತೀಯ ವೈದ್ಯಕೀಯ ಸಂಘ ಅಮಾನತುಗೊಳಿಸಿದೆ.
ಸೋಮವಾರ ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾದ ಡಾ. ಘೋಷ್, ಮಹಿಳೆಯ ಶವ ಪತ್ತೆಯಾದಾಗ ಪೊಲೀಸ್ ದೂರು ದಾಖಲಿಸಲು ವಿಫಲವಾದುದೂ ಸೇರಿದಂತೆ ನಿರ್ಲಕ್ಷ್ಯ ಧೋರಣೆ ತಳೆದ ಆರೋಪ ಹೊತ್ತಿದ್ದಾರೆ. ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಹತ್ಯೆಗೆ ಸಂಬಂಧಿಸಿದಂತೆ ಅವರು ಆರೋಪ ಎದುರಿಸುತ್ತಿಲ್ಲ. ಆದರೆ, ಜಾಮೀನು ರಹಿತ ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಪಾಕ್-ಚೀನಾ ಯುದ್ಧ, ನಕ್ಸಲರ ದಾಳಿ, ಕೋಮು ಗಲಭೆಗಳಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆಯೇ ಹೆಚ್ಚಿದೆ: ಗಡ್ಕರಿ
Advertisement
Advertisement
ಆದಾಗ್ಯೂ, ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರದ ಆರೋಪಗಳಿವೆ. ಮಾಜಿ ಉದ್ಯೋಗಿಯೊಬ್ಬರು, ಡಾ. ಘೋಷ್ ಅವರು ಮೃತದೇಹಗಳು ಮತ್ತು ಬಯೋಮೆಡಿಕಲ್ ತ್ಯಾಜ್ಯಗಳ ಕಳ್ಳಸಾಗಣೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
Advertisement
ಸಿಬಿಐ, ಘೋಷ್ ಅವರ ಕೋಲ್ಕತ್ತಾದ ಮನೆಯಲ್ಲಿ 11 ಗಂಟೆಗಳ ಸಮಗ್ರ ಶೋಧವನ್ನು ನಡೆಸಿತು. ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಇದುವರೆಗೆ ಸುಮಾರು 90 ಗಂಟೆಗಳ ಕಾಲ ಡಾ. ಘೋಷ್ ಅವರನ್ನು ಪ್ರಶ್ನೆಗೊಳಪಡಿಸಿದೆ. ಇದನ್ನೂ ಓದಿ: 12 ನೂತನ ಕೈಗಾರಿಕಾ ಸ್ಮಾರ್ಟ್ ಸಿಟಿ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ
Advertisement
IMA ಕೂಡ ಬಂಗಾಳದ ವೈದ್ಯರ ಆರೋಪಗಳನ್ನು ಉಲ್ಲೇಖಿಸಿದೆ. ಡಾ. ಘೋಷ್ ಅವರು ತಮ್ಮ ಕಾರ್ಯಗಳಿಂದ ವೃತ್ತಿಗೆ ಅಪಖ್ಯಾತಿ ತಂದಿದ್ದಾರೆ. ಶಿಸ್ತು ಸಮಿತಿಯು ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದೆ.