ಬೆಂಗಳೂರು: ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ (State Medical College) ಶೀಘ್ರವೇ ಮಾರ್ಗಸೂಚಿ ಪ್ರಕಟ ಮಾಡುತ್ತೇವೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ (Sharanprakash Patil) ಹೇಳಿದ್ದಾರೆ.
ಕೋಲ್ಕತ್ತಾ ಮೆಡಿಕಲ್ ಕಾಲೇಜಿನ (Kolkatta Medical College) ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ (Traini Docter Rape and Murder Case) ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರಿಂದ ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಪ್ರತ್ಯೇಕ ಮಾರ್ಗಸೂಚಿ ಜಾರಿ ಮಾಡಲು ನಿರ್ಧರಿಸಿದೆ. ಶೀಘ್ರವೇ ಮಾರ್ಗಸೂಚಿ ಪ್ರಕಟ ಮಾಡುತ್ತೇವೆ ಎಂದಿದ್ದಾರೆ.ಇದನ್ನೂ ಓದಿ: ನೇಪಾಳದಲ್ಲಿ ನದಿಗೆ ಉರುಳಿತು 40 ಭಾರತೀಯರಿದ್ದ ಬಸ್ಸು – 14 ಮಂದಿ ಸಾವು
Advertisement
Advertisement
ವಿಕಾಸಸೌಧಲ್ಲಿ ಮಾತನಾಡಿದ ಅವರು, ಎಲ್ಲಾ ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಹೊಸ ಮಾರ್ಗಸೂಚಿ ಪ್ರಕಟ ಮಾಡುವ ಕುರಿತು ಮಾಹಿತಿ ನೀಡಲಾಗಿದೆ. ಮೆಡಿಕಲ್ ಕಾಲೇಜುಗಳ ಅಸೋಸಿಯೇಷನ್‌ಗಳ ಜೊತೆ ಸಭೆ ನಡೆಸಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ಕೊಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಮಹಿಳೆಯರ ಸುರಕ್ಷತೆ, ಮೂಲಭೂತ ಸೌಕರ್ಯಗಳ ವ್ಯವಸ್ಥೆ, ಕೆಲಸದ ಅವಧಿ ಸೇರಿ ಇನ್ನಿತರ ಅಗತ್ಯ ಕ್ರಮಗಳನ್ನು ಪರಿಗಣನೆಗೆ ತೆಗೆದುಕೊಂಡು ಅಸೋಸಿಯೇಷನ್ ಜೊತೆ ಸಭೆ ನಡೆಸಿ ವರದಿ ನೀಡಲು ಈಗಾಗಲೇ ಸೂಚನೆ ನೀಡಿದ್ದೇವೆ. ಸಭೆ ನಡೆಸಿ ವರದಿ ಕೊಟ್ಟ ಬಳಿಕ ಸರ್ಕಾರ ಅದರ ಬಗ್ಗೆ ಪರಿಶೀಲನೆ ಮಾಡುತ್ತದೆ. ಅದಾದ ಬಳಿಕ ಮಾರ್ಗಸೂಚಿಯನ್ನು ಪ್ರಕಟ ಮಾಡಲಾಗುವುದು. ಸರ್ಕಾರ ಹೊರಡಿಸುವ ಮಾರ್ಗಸೂಚಿ ಖಾಸಗಿ ಮೆಡಿಕಲ್ ಕಾಲೇಜುಗಳಿಗೂ ಅನ್ವಯ ಆಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ: ಉಪ ಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು- ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ಆಯೋಜನೆ