ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

Public TV
1 Min Read
Protest

ಕೋಲ್ಕತ್ತಾ: ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Kolkata doctor rape and murder Case) ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಇದರಲ್ಲಿ ಆರೋಪಿಯ ಅಮಾನುಷ ಕೃತ್ಯಗಳು ಬಹಿರಂಗವಾಗಿದೆ. ಆರೋಪಿ ಸಂಜಯ್ ರಾಯ್ ವೈದ್ಯೆ ಮೇಲೆ ಅಮಾನುಷವಾಗಿ ಥಳಿಸಿದ್ದಾನೆ. ಅವನ ಹೊಡೆತಕ್ಕೆ ಟ್ರೈನಿ ವೈದ್ಯೆಯ ಕನ್ನಡಕ ಒಡೆದು ಕಣ್ಣಿಗೆ ಗಾಜು ಬಿದ್ದಿದೆ. ಇದರಿಂದಾಗಿ ಕಣ್ಣಿನಲ್ಲಿ ರಕ್ತ ಬಂದಿದೆ ವರದಿಯಲ್ಲಿದೆ.

kolkata doctor rape and murder case

ಎಲ್ಲಿ ನೋಡಿದರೂ ರಕ್ತ..!
ವೈದ್ಯೆಯ (Doctor) ಕಣ್ಣು ಮತ್ತು ಬಾಯಿ ಎರಡರಲ್ಲೂ ರಕ್ತ ಸುರಿಯುತ್ತಿತ್ತು. ವೈದ್ಯೆಯ ಮುಖವು ಗಾಯಗಳಿಂದ ತುಂಬಿದೆ. ಸಂತ್ರಸ್ತೆಯ ಖಾಸಗಿ ಅಂಗಗಳಲ್ಲಿಯೂ ತೀವ್ರ ರಕ್ತಸ್ರಾವವಾಗಿತ್ತು. ಹೊಟ್ಟೆ, ಎಡಗಾಲು, ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿಯ ಮೇಲೆ ಗಾಯಗಳಾಗಿವೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ದೇಶದ್ಯಾಂತ ಪ್ರತಿಭಟನೆ

Kolkata Protest

ಪ್ರಕರಣ ಏನು?
ಕಳೆದ ಶುಕ್ರವಾರ ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು  ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.  ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ಅವಮಾನ ಸಹಿಸಲಾರದೇ ಪ್ರಾಂಶುಪಾಲ ರಾಜೀನಾಮೆ

Share This Article